ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟದ ಒತ್ತಡಕ್ಕೆ ಮಣಿದ ಹಳದಿ ಲೋಹ, ದೇಶಿಯ ಚಿನಿವಾರ ಪೇಟೆಯಲ್ಲಿ ಸತತ ಮೂರನೇ ದಿನವೂ ಇಳಿಕೆ ದಾಖಲಿಸಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 10 ಗ್ರಾಂ. ಚಿನ್ನದ ಮೇಲೆ 94 ರೂ. ಇಳಿಕೆಯಾಗಿ 52,990 ರೂ.ಯಲ್ಲಿ ಮಾರಾಟ ಆಗುತ್ತಿದೆ. ಹಿಂದಿನ ವಹಿವಾಟಿನಲ್ಲಿ ಹಳದಿ ಲೋಹವು 10 ಗ್ರಾಂ.ಗೆ 53,084 ರೂ.ಯಲ್ಲಿ ವಹಿವಾಟು ನಡೆಸಿತ್ತು ಎಂದು ಹೆಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಹಿರಿಯ ವಿಶ್ಲೇಷಕ ತಪನ್ ಪಟೇಲ್ ಹೇಳಿದ್ದಾರೆ.
ಆದರೆ, ಬೆಳ್ಳಿಯ ಧಾರಣೆಯಲ್ಲಿ ಏರಿಕೆ ದಾಖಲಾಗಿದೆ. ಪ್ರತಿ ಕೆ.ಜಿ. ಬೆಳ್ಳಿಯ ಮೇಲೆ 782 ರೂ. ಏರಿಕೆಯಾಗಿ 69,262 ರೂ. ತಲುಪಿದೆ. ಹಿಂದಿನ ವಹಿವಾಟಿನಲ್ಲಿ 68,480 ರೂ.ಯಲ್ಲಿ ಮಾರಾಟ ಆಗುತ್ತಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಔನ್ಸ್ ಚಿನ್ನವು 1,938 ಡಾಲರ್ನಲ್ಲಿ ಖರೀದಿ ಆಗುತ್ತಿದ್ದರೇ ಬೆಳ್ಳಿ 27.19 ಡಾಲರ್ನಲ್ಲಿ ಮಾರಾಟ ಆಗುತ್ತಿದೆ.
ದಿನದ ಕನಿಷ್ಠ ಮಟ್ಟದಿಂದ ಚೇತರಿಸಿಕೊಂಡ ಡಾಲರ್, ಚಿನ್ನದ ದರದಲ್ಲಿ ಇಳಿಕೆಯ ಪರೇಡ್ ನಡೆಸಿತು. ಅಮೆರಿಕ ಮತ್ತು ಚೀನಾ ನಡುವಿನ ವಾಣಿಜ್ಯ ಸಮರದ ಸುದ್ದಿಗಳು ಪ್ರಕಟಣೆ ಸಹ ದರ ಏರಿಕೆಗೆ ಕಾರಣವಾಯಿತು ಎಂದು ಪಟೇಲ್ ಅಭಿಪ್ರಾಯಪಟ್ಟರು.