ಹೈದರಾಬಾದ್: ಕಳೆದ ಕೆಲ ದಿನಗಳಿಂದ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ನಿರಂತರವಾಗಿ ಇಳಿಕೆ ಕಂಡು ಬರುತ್ತಿದ್ದು, ಇದರಿಂದ ಚಿನ್ನಾಭರಣ ಖರೀದಿ ಮಾಡಲು ಇದು ಒಳ್ಳೆಯ ಟೈಂ ಆಗಿದೆ. ಕಳೆದ ಎರಡು ದಿನಗಳಲ್ಲಿ ಚಿನ್ನದ ಮೇಲಿನ ಬೆಲೆ ದಾಖಲೆ ಮಟ್ಟದಲ್ಲಿ ಇಳಿಕೆಯಾಗಿದ್ದು, ಗ್ರಾಹಕರು ಖರೀದಿಗೆ ಮುಗಿ ಬೀಳುತ್ತಿದ್ದಾರೆ.
ನಿನ್ನೆಯಷ್ಟೇ ಬಂಗಾರದ ಬೆಲೆಯಲ್ಲಿ ಪ್ರತಿ 10 ಗ್ರಾಂಗೆ 317ರೂ ಕುಸಿತ ಕಂಡಿತ್ತು. ಇದರ ಬೆನ್ನಲ್ಲೇ ಇಂದು ಕೂಡ 176 ರೂ ಇಳಿಕೆಯಾಗಿದೆ. ಈ ಮೂಲಕ 45,110 ರೂ ಇದೆ. ಇದರ ಜೊತೆಗೆ ಬೆಳ್ಳಿ ಬೆಲೆಯಲ್ಲೂ 898 ರೂಪಾಯಿ ಇಳಿಕೆಯಾಗಿದ್ದು, ಸದ್ಯ ಪ್ರತಿ ಕೆಜಿಗೆ 61,765 5ರೂ. ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನಾಭರಣದ ಮೇಲಿನ ಹೂಡಿಕೆ ಕಡಿಮೆಯಾಗಿರುವುದೇ ಇದಕ್ಕೆ ಮುಖ್ಯ ಕಾರಣ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿರಿ: ರಾಜ್ಯಸಭೆಯಲ್ಲಿ ವಿಪಕ್ಷಗಳ ಗದ್ದಲ, ಗಲಾಟೆ: 'ಜೈ ಜವಾನ್, ಜೈ ಕಿಸಾನ್' ಘೋಷಣೆ ಕೂಗಿ ಆಕ್ರೋಶ
ಭಾರತದಲ್ಲಿ ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 45,110 ರೂ. ಇದೆ. ಅದೇ ರೀತಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆಯೂ ಕಡಿಮೆಯಾಗಿದ್ದು, ಇದರ ಬೆಲೆ 47,705 ರೂ.ಆಗಿದೆ.