ಮುಂಬೈ: ಕಳೆದ ಕೆಲ ದಿನಗಳಿಂದ ದೇಶದಲ್ಲಿ ಚಿನ್ನದ ಬೆಲೆ ಏರುಗತಿಯಲ್ಲಿ ಸಾಗುತ್ತಿದೆ. ಇವತ್ತೂ ಕೂಡ ಹಳದಿ ಲೋಹದ ಬೆಲೆಯಲ್ಲಿ ಮತ್ತಷ್ಟು ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ಬೆಲೆ ಇದೀಗ 55 ಸಾವಿರ ರೂಪಾಯಿಯ ಸನಿಹಕ್ಕೆ ಬಂದು ತಲುಪಿದೆ.
ಕಳೆದ ಕೆಲ ತಿಂಗಳಲ್ಲಿ 10 ಗ್ರಾಂ ಬಂಗಾರದ ಬೆಲೆ ಬರೋಬ್ಬರಿ 15 ಸಾವಿರ ರೂಪಾಯಿ ಏರಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿಗೆ ಬೇಡಿಕೆ ಹೆಚ್ಚುತ್ತಿರುವುದೇ ಇದಕ್ಕೆ ಮುಖ್ಯ ಕಾರಣವಾಗಿದೆ.
ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನಕ್ಕೆ 52,065ರೂ. ಆಗಿದ್ದು, ಬೆಳ್ಳಿ ಬೆಲೆ ಪ್ರತಿ ಕೆ.ಜಿಗೆ 65,410ರೂಪಾಯಿ ಇದೆ. 24 ಕ್ಯಾರೆಟ್ ಚಿನ್ನದ ಬೆಲೆ ಈಗಾಗಲೇ 55 ಸಾವಿರ ರೂಪಾಯಿ ಸಮೀಪಿಸುತ್ತಿದ್ದು, ಇಂದು ಕೂಡ 200 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಇಂದು 800 ರೂಪಾಯಿ ಹೆಚ್ಚಾಗಿದೆ.