ನವದೆಹಲಿ: ಸತತ ಐದನೇ ದಿನವೂ ಚಿನ್ನದ ಬೆಲೆಗಳುನ ಕುಸಿತವಾಗಿದ್ದು, ಶುಕ್ರವಾರ ರಾಷ್ಟ್ರ ರಾಜಧಾನಿಯಲ್ಲಿ 10 ಗ್ರಾಂ. ಮೇಲೆ 163 ರೂ.ಯಷ್ಟು ಇಳಿದು 46,738 ರೂ.ಗೆ ತಲುಪಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ತಿಳಿಸಿದೆ.
ಹಿಂದಿನ ವಹಿವಾಟಿನಲ್ಲಿ ಅಮೂಲ್ಯವಾದ ಲೋಹವು 10 ಗ್ರಾಂ.ಗೆ 46,901 ರೂ.ಗಳಲ್ಲಿ ಮಾರಾಟ ಆಗುತ್ತಿತ್ತು. ಬೆಳ್ಳಿ ಪ್ರತಿ ಕೆ.ಜಿ. ಮೇಲೆ 66,953 ರೂ.ಗಳಿಂದ 530 ರೂ.ಗಳಷ್ಟು ಹೆಚ್ಚಳವಾಗಿ 67,486 ರೂ.ಗೆ ತಲುಪಿದೆ.
ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 3 ಪೈಸೆ ಏರಿಕೆ ಕಂಡು 72.93 ರೂ.ಗೆ ತಲುಪಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನವು ಔನ್ಸ್‌ಗೆ 1,810 ಡಾಲರ್ ಮತ್ತು ಬೆಳ್ಳಿ ಔನ್ಸ್‌ಗೆ 26.71 ಡಾಲರ್‌ಗಳಷ್ಟು ಲಾಭದೊಂದಿಗೆ ವಹಿವಾಟು ನಿರತವಾಗಿದೆ.