ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಕಾರಾತ್ಮಕ ಪ್ರವೃತ್ತಿಯ ಹಿನ್ನೆಲೆಯಲ್ಲಿ ಚಿನ್ನದ ಬೆಲೆಗಳು ರಾಷ್ಟ್ರ ರಾಜಧಾನಿಯಲ್ಲಿ ಶುಕ್ರವಾರದ ವಹಿವಾಟಿನಂದು ಪ್ರತಿ 10 ಗ್ರಾಂ. ಮೇಲೆ 236 ರೂ. ಏರಿಕೆಯಾಗಿ 51,558 ರೂ.ಗೆ ತಲುಪಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ತಿಳಿಸಿದೆ.
ಹಿಂದಿನ ವಹಿವಾಟಿನಲ್ಲಿ ಚಿನ್ನ 10 ಗ್ರಾಂ.ಗೆ 51,322 ರೂ.ನಷ್ಟಿತ್ತು ಅದೀಗ 51,558 ರೂ.ಗೆ ತಲುಪಿದೆ. ಬೆಳ್ಳಿ ಬೆಲೆಯು ಕಿಲೋಗ್ರಾಂಗೆ 62,399 ರೂ.ಗಳಿಂದ 376 ರೂ. ಹೆಚ್ಚಳವಾಗಿ 62,775 ರೂ.ಗೆ ಮುಟ್ಟಿದೆ.
ದೆಹಲಿಯಲ್ಲಿ 24 ಕ್ಯಾರೆಟ್ ಸ್ಪಾಟ್ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯ ಸಕಾರಾತ್ಮಕ ಪರಿಣಾಮದಿಂದ 236 ರೂ. ಏರಿಕೆಯಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಹಿರಿಯ ವಿಶ್ಲೇಷಕ (ಸರಕು) ತಪನ್ ಪಟೇಲ್ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಎರಡೂ ಔನ್ಸ್‌ಗೆ ಕ್ರಮವಾಗಿ 1,910 ಡಾಲರ್ ಮತ್ತು 24.27 ಡಾಲರ್‌ಗಳಲ್ಲಿ ವಹಿವಾಟು ನಡೆಸುತ್ತಿವೆ.