ನವದೆಹಲಿ: ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳಿಂದ ಜನಸಾಮಾನ್ಯರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಕೇಂದ್ರ ಹಣಕಾಸು ಬಜೆಟ್ ಮಂಡನೆ ಹಿನ್ನೆಲೆಯಲ್ಲಿಯೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ಗಳ ಬೆಲೆಯನ್ನು ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು ಇಳಿಸಿವೆ.
ಫೆಬ್ರವರಿ 1ರಿಂದ 19 ಕೆಜಿ ತೂಕದ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ 91.50 ರೂಪಾಯಿಯಷ್ಟು ಇಳಿಕೆ ಮಾಡಲಾಗಿದೆ. ಅಂದರೆ, ದೆಹಲಿಯಲ್ಲಿ 19ಕೆಜಿ ಸಿಲಿಂಡರ್ನ ಬೆಲೆ 1907 ರೂಪಾಯ ಆಗಲಿದೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಹೊಸ ವರ್ಷದ ಮೊದಲ ದಿನದಂದು ವಾಣಿಜ್ಯ ಸಿಲಿಂಡರ್ನ ಬೆಲೆಯನ್ನು ನೂರು ರೂಪಾಯಿಗಳ ಕಡಿತ ಮಾಡಲಾಗಿತ್ತು. ಈಗ ಸುಮಾರು 91 ರೂಪಾಯಿ ಕಡಿತಗೊಳಿಸಲಾಗಿದ್ದು, 14.2 ಕೆಜಿ ತೂಕದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
ಇದನ್ನೂ ಓದಿ: ಇಕ್ವಿಟಿ - ಲಿಂಕ್ಡ್ ಸೇವಿಂಗ್ ಸ್ಕೀಮ್ನಲ್ಲಿ ಹಣ ಹೂಡಿಕೆ ಮಾಡಿದ್ದೀರಾ? ಹಾಗಾದರೆ ಅದರ ಪ್ರಯೋಜನಗಳೇನು?