ನವದೆಹಲಿ: ಭಾರತದ ಪ್ರಮುಖ ಮೆಟ್ರೊ ನಗರಗಳಲ್ಲಿ ಇಂಧನ ಚಿಲ್ಲರೆ ಮಾರುಕಟ್ಟೆಯ ಲೀಟರ್ ಪೆಟ್ರೋಲ್ ದರದಲ್ಲಿ 5 ಪೈಸೆ ಏರಿಕೆ ಆಗಿದ್ದು, ಡಿಸೇಲ್ ಬೆಲೆಯು ಯಥಾಸ್ಥಿತಿಯಲ್ಲಿ ಮುಂದುವರಿದಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ತನ್ನ ವೆಬ್ಸೈಟ್ನಲ್ಲಿ ಬೆಲೆ ಏರಿಕೆ ಕುರಿತು ಪ್ರಕಟಿಸಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀ. ಪೆಟ್ರೋಲ್ ಮತ್ತು ಡೀಸೆಲ್ ಕ್ರಮವಾಗಿ ₹ 72.86 & ₹ 66.60ರಲ್ಲಿ ವಹಿವಾಟು ನಿರತವಾಗಿದೆ.
ಕೊಲ್ಕತ್ತಾ, ಮುಂಬೈ, ಚೆನ್ನೈ ಮತ್ತು ಬೆಂಗಳೂರಿನಲ್ಲಿ ಲೀ. ಪೆಟ್ರೋಲ್ ಮತ್ತು ಡೀಸೆಲ್ ಕ್ರಮವಾಗಿ ₹ 74.93 & 68.39, ₹ 78.48 & ₹ 69.76, ₹ 75.67 & ₹ 70.37 ಹಾಗೂ ₹ 75.28 & ₹ 68.81 ದರದಲ್ಲಿ ಮಾರಾಟ ಆಗುತ್ತಿದೆ.
ಅಂತಾರಾಷ್ಟ್ರೀಯ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಇಂಧನ ದರ ಏರಿಕೆ ಇದಕ್ಕೆ ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಬೆಂಚ್ಮಾರ್ಕ್ ಬ್ರೆಂಟ್ ಪ್ರತಿ ಬ್ಯಾರೆಲ್ ಕಚ್ಚಾ ತೈಲವು ಪ್ರಸ್ತುತ 67 ಡಾಲರ್ನಲ್ಲಿ ವಹಿವಾಟು ನಡೆಸುತ್ತಿದೆ.