ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಬಳಿಕ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಕೇರಳದ ವಯನಾಡ್ ಸಂಸದ ರಾಹುಲ್ ಗಾಂಧಿ ತಮ್ಮ ಅಧಿಕೃತ ಟ್ವಿಟರ್ನಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 'ಅಭಿವೃದ್ಧಿ' ಕಂಡುಬಂದಿದೆ. ಮೋದಿ ಸರ್ಕಾರ ಇಂಧನಕ್ಕೆ ಭಾರಿ ತೆರಿಗೆ ವಿಧಿಸುವ ಮೂಲಕ ಜನರನ್ನು ದೋಚುತ್ತಿದೆ. ಪೆಟ್ರೋಲ್-ಡೀಸೆಲ್ ಮೇಲೆ ಜಿಎಸ್ಟಿ ಜಾರಿಗೆ ತರಲು ಸರ್ಕಾರ ಸಿದ್ಧವಾಗಿಲ್ಲ ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ನಾಳೆಯಿಂದ ಕೇರಳ ಬಜೆಟ್ ಅಧಿವೇಶನ: ಪಿಣರಾಯಿ ಸರ್ಕಾರದ ಕೊನೆ ಅಧಿವೇಶನ!
ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತರಲು ಕಾಂಗ್ರೆಸ್ ಮೊದಲಿನಿಂದಲೂ ಒತ್ತಾಯಿಸುತ್ತಿದೆ. ಆದರೆ ಸರ್ಕಾರ ಅದನ್ನು ನಿರಾಕರಿಸಿದೆ. ತೈಲ ಕಂಪನಿಗಳು ಕಳೆದ ಎರಡು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ನ ಚಿಲ್ಲರೆ ಬೆಲೆ ಹೆಚ್ಚಿಸಿವೆ.
ಕಳೆದ ಎರಡನೇ ದಿನವೂ ಪೆಟ್ರೋಲ್ ಬೆಲೆ ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 84.20 ರೂ.ಗೆ ತಲುಪಿದೆ. 2018ರ ಅಕ್ಟೋಬರ್ 4 ರಂದು ಚಿಲ್ಲರೆ ಬೆಲೆ ಲೀಟರ್‌ಗೆ 84 ರೂ. ಆಗಿದ್ದು ಇದುವರೆಗಿನ ಗರಿಷ್ಠ ಏರಿಕೆ ಆಗಿತ್ತು.