ಮುಂಬೈ: ಜಾಗತಿಕ ಮಾರುಕಟ್ಟೆಯಲ್ಲಿ ಚೀನಾ ಮತ್ತು ಅಮೆರಿಕ ನಡುವೆ ವಾಣಿಜ್ಯ ಸಮರ ತಾರಕಕ್ಕೇರುತ್ತಿದ್ದು, ಚಿನ್ನದ ದರದಲ್ಲಿ ಏರಿಳಿತವಾಗುತ್ತಿದೆ.
ಶುಕ್ರವಾರದ ಚಿನಿವಾರ ಪೇಟೆಯಲ್ಲಿ ಚಿನ್ನದ ದರದಲ್ಲಿ ಅಲ್ಪ ಇಳಿಕೆಯಾಗಿದ್ದು, ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. 22 ಕ್ಯಾರೆಟ್ ಚಿನ್ನದ ಬೆಲೆ ₹ 32,400 ಹಾಗೂ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ₹ 34,652 ಮಾರಾಟ ಆಗುತ್ತಿದೆ. ಆದರೆ, ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆ.ಜಿ.ಗೆ ₹ 40,800ಯಲ್ಲಿ ವಹಿವಾಟು ನಡೆಸುತ್ತಿದೆ.
ಸಿಲಿಕಾನ್ ಸಿಟಿಯಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ವ್ಯಾಪಾರಿಗಳ ಒಕ್ಕೂಟ ಹಾಗೂ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ನಿತ್ಯದ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಹಾಗೂ ಚಿನ್ನ ಮೇಲಿನ ಆಮದು ಸುಂಕ ಆಧರಿಸಿರುತ್ತದೆ.