ETV Bharat / business

ಬೆಂಗಳೂರು: ಉದ್ಯಮ ಕ್ಷೇತ್ರದ ಸಾಧಕರಿಗೆ 'ಪ್ರೈಡ್ ಇಂಡಿಯಾ ಅವಾರ್ಡ್' - ಪ್ರೈಡ್ ಇಂಡಿಯಾ ಅವಾರ್ಡ್ ಸಂಸ್ಥೆ

ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ 'ಕಬ್ಜ' ಸಿನಿಮಾ ಖ್ಯಾತಿಯ ನಟಿ ಶ್ರಿಯಾ ಸರಣ್ ಅವರು ಉದ್ಯಮ ಕ್ಷೇತ್ರದ ಸಾಧಕರಿಗೆ ಪ್ರೈಡ್ ಇಂಡಿಯಾ ಅವಾರ್ಡ್ ನೀಡಿ ಗೌರವಿಸಿದರು.

actress Shreya Sharan shined at the pride india award distribution programa
ಇಂಡಿಯಾ ಪ್ರೈಡ್ ಅವಾರ್ಡ್ ಇವೆಂಟ್​​ದಲ್ಲಿ ನಟಿ ಶ್ರೀಯಾ ಶರಣ್ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು
author img

By

Published : Aug 20, 2023, 8:31 AM IST

ಬೆಂಗಳೂರು: ಭಾರತೀಯ ಉದ್ಯಮ ಕ್ಷೇತ್ರದ ಸಾಧಕರನ್ನು ಗುರುತಿಸಿ ವಿತರಿಸಲಾಗುವ ಪ್ರಶಸ್ತಿ 'ಪ್ರೈಡ್ ಇಂಡಿಯಾ ಅವಾರ್ಡ್’. ಇತ್ತೀಚೆಗೆ ಬೆಂಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಿತು. ಉದ್ಯಮ ರಂಗದ ದಿಗ್ಗಜರು, ಸಾಧಕರು ನೆರೆದಿದ್ದ ಕಾರ್ಯಕ್ರಮಕ್ಕೆ ಭಾರತೀಯ ಚಿತ್ರರಂಗದ ಖ್ಯಾತ ನಟಿ ಶ್ರಿಯಾ ಸರಣ್ ವಿಶೇಷ ಅತಿಥಿಯಾಗಿ ಆಗಮಿಸಿದ್ದರು.

"ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿ ಕೊಡುವ ಕಾರ್ಯಕ್ರಮ ಅರ್ಥವತ್ತಾಗಿದೆ. ಸಣ್ಣದು, ದೊಡ್ಡದೆಂಬುದರಾಚೆಗೆ ಇಂಥ ಪ್ರಶಸ್ತಿಗಳು ಘನತೆಯ ಕಾರಣದಿಂದ ಮುಖ್ಯವಾಗುತ್ತವೆ. ಮುಂದೊಂದು ದಿನ ಪ್ರೈಡ್ ಇಂಡಿಯಾ ಅವಾರ್ಡ್ ಕಾರ್ಯಕ್ರಮ ಗ್ರೇಟ್ ಶೋ ಅನ್ನಿಸಿಕೊಳ್ಳಲಿದೆ" ಎಂದು ನಟಿ ಶ್ರಿಯಾ ಸರಣ್‌ ಪ್ರಶಸ್ತಿ ವಿತರಿಸಿ ಅಭಿಪ್ರಾಯಪಟ್ಟರು.

ಪ್ರೈಡ್ ಇಂಡಿಯಾ ಅವಾರ್ಡ್ ಪರಿಕಲ್ಪನೆ ವಿನಯ್ ಕುಮಾರ್ ನಾರಾಯಣಸ್ವಾಮಿ ಅವರ ಕನಸಿನ ಕೂಸು. ಉದ್ಯಮ ವಲಯದಲ್ಲಿ ಹೊಸ ಸಾಹಸಗಳನ್ನು ಮಾಡಿ ಗೆದ್ದವರು ನಾನಾ ವಿಭಾಗದಲ್ಲಿದ್ದಾರೆ. ಅಂಥವರನ್ನು ಗುರುತಿಸಿ ಪ್ರೋತ್ಸಾಹಿಸುತ್ತಾ ಭಾರತೀಯ ಉದ್ಯಮರಂಗ ಹೊಸ ಸಾಧ್ಯತೆಗಳಿಗೆ ಒಡ್ಡಿಕೊಳ್ಳಲು ಪ್ರೇರಣೆ ನೀಡುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಸಂಘಟಕರು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಉದ್ಯಮ ರಂಗದ ಮುನ್ನೂರಕ್ಕೂ ಹೆಚ್ಚು ಮಂದಿ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಪ್ರೈಡ್ ಇಂಡಿಯಾ ಅವಾರ್ಡ್ ವಿಶೇಷ ಆವೃತ್ತಿಯಲ್ಲಿ ಡಾ. ಸಿದ್ದೇಶ್ವರ್ ಮನೋಜ್, ಡಾ. ಮೀರ್ ಅನ್ವರ್, ಮೊಹಿಯುದ್ದೀನ್, ಸುಧಾಂಶು ಶ್ರೀವಾತ್ಸವ್, ಡಾ. ಭಾಸ್ಕರನ್ ರಾಜು ತೀರ್ಪುಗಾರರ ವಿಶೇಷ ಸಮಿತಿ ರಚಿಸಲಾಗಿತ್ತು. ಯಾವುದೇ ಉದ್ಯಮದಲ್ಲಿನ ಹೊಸತನ, ಪ್ರಯೋಗಶೀಲತೆ, ಸಾಹಸ ಪ್ರವೃತ್ತಿಯನ್ನು ಪರಿಗಣಿಸುತ್ತಲೇ ಗಹನ ಚರ್ಚೆ, ಹಲವಾರು ಮಾನದಂಡಗಳ ಆಧಾರದಲ್ಲಿ ಈ ಸಮಿತಿಯು ಪ್ರೈಡ್ ಇಂಡಿಯಾ ಅವಾರ್ಡ್‌ಗೆ ಅರ್ಹರನ್ನು ಆಯ್ಕೆ ಮಾಡಿದೆ.

ಅವಾರ್ಡ್ ಈವೆಂಟ್ ಸ್ಥಾಪಕ ವಿನಯ್ ಕುಮಾರ್ ನಾರಾಯಣಸ್ವಾಮಿ ಮಾತಾಡಿ, ಭಾರತೀಯ ಉದ್ಯಮ ರಂಗದಲ್ಲಿ ನಡೆಯುತ್ತಿರುವ ನಾವೀನ್ಯತೆ ಖುಷಿ ಕೊಡುತ್ತಿದೆ. ಪ್ರೈಡ್ ಇಂಡಿಯಾ ಅವಾರ್ಡ್ ಸಂಸ್ಥೆ ಸದಾ ಕಾಲವೂ ಉದ್ಯಮ ರಂಗದಲ್ಲಿನ ವೈಶಿಷ್ಟ್ಯ ಮತ್ತು ಅಮೋಘ ಸಾಧನೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಧ್ಯೇಯ ಹೊಂದಿದೆ ಎಂದರು.

ಇದನ್ನೂಓದಿ: 'ಟೈಗರ್ ನಾಗೇಶ್ವರ ರಾವ್' ಚಿತ್ರದ ಟೀಸರ್​​ ರಿಲೀಸ್​: ರಗಡ್​ ಲುಕ್​ನಲ್ಲಿ ಮಾಸ್​ ಮಹಾರಾಜ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.