ETV Bharat / business

ಬಜೆಟ್​ನಲ್ಲಿ 5 ಸಾವಿರ ವಸತಿ ರಹಿತ ಪೌರ ಕಾರ್ಮಿಕರಿಗೆ ಮನೆ.. ಸಚಿವ ಎಂಟಿಬಿ ನಾಗರಾಜ್​ ಹರ್ಷ - 5 ಸಾವಿರ ವಸತಿ ರಹಿತ ಪೌರ ಕಾರ್ಮಿಕರಿಗೆ ಮನೆ

ಸುಮಾರು 5 ಸಾವಿರ ವಸತಿ ರಹಿತ ಪೌರ ಕಾರ್ಮಿಕರಿಗೆ ಮನೆಗಳನ್ನು ನಿರ್ಮಾಣಕ್ಕೆ 300 ಕೋಟಿ ರೂ. ಅನುದಾನ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್​ನಲ್ಲಿ 'ಪೌರ ಆಸರೆ' ಯೋಜನೆ ಘೋಷಣೆ.

Karnataka budget
'ಪೌರ ಆಸರೆ' ಯೋಜನೆ
author img

By

Published : Feb 17, 2023, 2:21 PM IST

ಬೆಂಗಳೂರು: ಸುಮಾರು ಐದು ಸಾವಿರ ವಸತಿ ರಹಿತ ಪೌರ ಕಾರ್ಮಿಕರಿಗೆ 300 ಕೋಟಿ ರೂ. ವೆಚ್ಚದಲ್ಲಿ ಮನೆಗಳನ್ನು ನಿರ್ಮಿಸಲು ಉದ್ದೇಶಿಸಿರುವ 'ಪೌರ ಆಸರೆ' ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಜೊತೆಗೆ ಎಸ್ಸಿ, ಎಸ್ಟಿ ಮನೆ ನಿರ್ಮಾಣದ ಅನುದಾನ ಹೆಚ್ಚಳ ಮಾಡಲಾಗಿದೆ. 1.75 ಲಕ್ಷದಿಂದ 2 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ.

ಸಚಿವ ಎಂಟಿಬಿ ನಾಗರಾಜು ಹರ್ಷ: ಈ ವಸತಿ ಯೋಜನೆ ಪ್ರಸ್ತಾಪಿಸಿರುವುದಕ್ಕೆ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜು ಹರ್ಷ ವ್ಯಕ್ತಪಡಿಸಿದ್ದಾರೆ.
2023-24ನೇ ಸಾಲಿನ ಬಜೆಟ್​ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ''ಕೆಎಸ್ಎಸ್ಐಡಿಸಿ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಕೋಡ್ಕಣಿ, ಬೆಳಗಾವಿಯ ಕಣಗಲಾ, ರೈತರಿಗೆ ನೀಡುವ ಬಡ್ಡಿರಹಿತ ಅಲ್ಪಾವಧಿ ಸಾಲದ ಮಿತಿಯನ್ನು 3 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೆ ಹೆಚ್ಚಿಸಿ 30 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25,000 ಕೋಟಿ ರೂ.ಗಳಷ್ಟು ಸಾಲ ನೀಡುವ ಪ್ರಸ್ತಾಪದೊಂದಿಗೆ ರೈತರಿಗೆ ಅಗತ್ಯಕ್ಕೆ ತಕ್ಕಂತೆ ಸಾಲ ಸೌಲಭ್ಯ ದೊರಕಿಸಿದಂತಾದೆ'' ಎಂದು ತಿಳಿಸಿದ್ದಾರೆ.

ಆಹಾರ ಧಾನ್ಯಗಳನ್ನು ಖರೀದಿಸಲು 3,500 ಕೋಟಿ ರೂ.: ''ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಆಹಾರ ಧಾನ್ಯಗಳನ್ನು ಖರೀದಿಸಲು 3,500 ಕೋಟಿ ರೂ.ಗಳನ್ನು ಆವರ್ತ ನಿಧಿಗೆ ಒದಗಿಸಿ ರಾಜ್ಯದ ಇತಿಹಾಸದಲ್ಲಿಯೇ ಅತಿ ಹೆಚ್ಚಿನ ಗಾತ್ರದ ಕನಿಷ್ಠ ಬೆಂಬಲ ಬೆಲೆ ಆವರ್ತ ನಿಧಿ ಸ್ಥಾಪಿಸಿದ ಕೀರ್ತಿಗೆ ಬೊಮ್ಮಾಯಿ ಅವರಿಗೆ ಸಲ್ಲಲಿದೆ'' ಎಂದು ಹೇಳಿದರು.

ಸಮೃದ್ಧ ಕರ್ನಾಟಕದ ಗುರಿ: ಕರ್ನಾಟಕದ ಜಿಡಿಪಿಯು ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಪರಿವರ್ತಿಸುವ ಮಹತ್ವಾಕಾಂಕ್ಷೆಯ ಭವಿಷ್ಯದ ಮುನ್ನೋಟವಿರುವ, ವಾಸ್ತವದ ಸವಾಲುಗಳನ್ನು ಮೆಟ್ಟಿ, ರಾಜಸ್ವ ಹೆಚ್ಚಳದ ಜೊತೆಗೆ ಸಮೃದ್ಧ ಕರ್ನಾಟಕದ ಗುರಿಯನ್ನು ಸಾಧಿಸುವ ಹಂಬಲದ ಆಯವ್ಯಯವನ್ನು ಮಂಡಿಸಿರುವುದಕ್ಕಾಗಿ ಮುಖ್ಯಮಂತ್ರಿಗಳನ್ನು ಅಭಿನಂದಿಸುತ್ತೇನೆ ಎಂದು ಸಚಿವ ಎಂಟಿಬಿ ನಾಗರಾಜ ಹೇಳಿದರು.

ಸಣ್ಣ ಕೈಗಾರಿಕೆಗಳ ಬೆಳವಣಿಗೆಗೆ ಒತ್ತು: ಚಾಮರಾಜನಗರದ ಬದನಗುಪ್ಪೆ, ಕಲ್ಬುರ್ಗಿ ಯ ಚಿತ್ತಾಪುರ, ತುಮಕೂರಿನ ಬೈರಗೊಂಡನಹಳ್ಳಿ-ಚಿಕ್ಕನಾಯಕನಹಳ್ಳಿ, ಬೀದರ್ ನ ಹುಮನಾಬಾದ್, ರಾಯಚೂರು ಗ್ರಾಮಾಂತರ, ವಿಜಯಪುರದ ಹೂವಿನ ಹಿಪ್ಪರಗಿ ಮತ್ತು ಚಿತ್ರದುರ್ಗದ ಮೊಳಕಾಲ್ಮೂರಿನಲ್ಲಿ ಹೊಸದಾಗಿ ಕೈಗಾರಿಕಾ ವಸಾಹತುಗಳನ್ನು ಸ್ಥಾಪಿಸಲು ಬಜೆಟ್​ನಲ್ಲಿ ಪ್ರಸ್ತಾಪಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಸಣ್ಣ ಕೈಗಾರಿಕೆಗಳ ಬೆಳವಣಿಗೆಗೆ ಸಹಕಾರಿಯಾಗಿ ಉದ್ಯೋಗಾವಕಾಶ ಮತ್ತು ಆರ್ಥಿಕ ಬೆಳವಣಿಗೆಗೆ ನೆರವಾಗಲಿದೆ'' ಎಂದು ಸಚಿವ ಎಂಟಿಬಿ ನಾಗರಾಜು ಹರ್ಷ ಹೇಳಿದರು.

ಇದನ್ನೂ ಓದಿ: ಕರ್ನಾಟಕ ಬಜೆಟ್​ 2023: ಬಜೆಟ್​ನಲ್ಲಿ ಗ್ರಾಮೀಣಾವೃದ್ಧಿ ಕ್ಷೇತ್ರಕ್ಕೆ ಭರಪೂರ ಕೊಡುಗೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.