ETV Bharat / business

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ಈಗ ಪ್ರತಿ ಸಿಲಿಂಡರ್‌ ಬೆಲೆ ಎಷ್ಟು ಗೊತ್ತಾ? - etv bharat kannada

ತೈಲ ಕಂಪನಿಗಳು ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ಬೆಲೆಯನ್ನು 7 ರೂಪಾಯಿ ಹೆಚ್ಚಿಸಿವೆ.

Commercial LPG gas cylinder price hiked by Rs 7
ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ಈಗ ಪ್ರತಿ ಸಿಲಿಂಡರ್‌ ಬೆಲೆ ಎಷ್ಟು ಗೊತ್ತಾ?
author img

By

Published : Jul 4, 2023, 5:38 PM IST

Updated : Jul 4, 2023, 7:51 PM IST

ನವದೆಹಲಿ: ತೈಲ ಕಂಪನಿಗಳು (ಒಎಂಸಿ) ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ಬೆಲೆಯನ್ನು 7 ರೂ. ಹೆಚ್ಚಿಸಿವೆ. ಈಗ ದೆಹಲಿಯಲ್ಲಿ ವಾಣಿಜ್ಯ ಅನಿಲ ಸಿಲಿಂಡರ್‌ನ ಚಿಲ್ಲರೆ ಬೆಲೆ ಅಂದರೆ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಪ್ರತಿ ಸಿಲಿಂಡರ್‌ಗೆ 1,773 ರೂ.ನಿಂದ 1,780 ರೂ.ಗೆ ಏರಿಕೆಯಾಗಿದೆ. ಆದರೆ, ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇನ್ನು ಮುಂಬೈನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1,733.50 ರಿಂದ 1,740.50 ಕ್ಕೆ, ಚೆನ್ನೈನಲ್ಲಿ 1,945 ರಿಂದ 1,952 ಕ್ಕೆ ಮತ್ತು ಕೋಲ್ಕತ್ತಾದಲ್ಲಿ 1,895 ರಿಂದ 1,902 ಕ್ಕೆ ಏರಿಕೆಯಾಗಲಿದೆ.

ಈ ವರ್ಷದ ಮೇ ಮತ್ತು ಜೂನ್​ನಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ಗಳ ಬೆಲೆಗಳನ್ನು ಸತತ ಎರಡು ಬಾರಿ ಕಡಿಮೆ ಮಾಡಲಾಗಿತ್ತು. ಮೇ ತಿಂಗಳಲ್ಲಿ ಒಎಂಸಿಗಳು ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ಬೆಲೆಯನ್ನು 172 ರೂ.ಗಳಷ್ಟು ಕಡಿಮೆ ಮಾಡಿದ್ದರೆ, ಜೂನ್​ನಲ್ಲಿ 83 ರೂ. ಇಳಿಸಿದ್ದವು. ಜೂನ್ 1 ರಂದು 19 ಕೆಜಿಯ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ಗಳ ಬೆಲೆ 1,773 ರೂ ಆಗಿತ್ತು. ತೈಲ ಕಂಪನಿಗಳು ಸಾಮಾನ್ಯವಾಗಿ ಎಲ್​ಪಿಜಿ ಸಿಲಿಂಡರ್​ ಬೆಲೆಗಳನ್ನು ಪ್ರತಿ ತಿಂಗಳ ಮೊದಲ ದಿನದಂದು ಪರಿಷ್ಕರಿಸುತ್ತವೆ.

ಗೃಹಬಳಕೆಯ ಎಲ್​ಪಿಜಿ ಸಿಲಿಂಡರ್​ಗಳ ಬೆಲೆಗಳು ಸ್ಥಳೀಯ ತೆರಿಗೆಗಳನ್ನು ಅವಲಂಬಿಸಿ ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ತೈಲ ಕಂಪನಿಗಳು ಈ ವರ್ಷದ ಮಾರ್ಚ್ 1 ರಂದು ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ಗಳ ಬೆಲೆಯನ್ನು ಪ್ರತಿ ಯೂನಿಟ್​ಗೆ 350.50 ರೂ ಮತ್ತು ಗೃಹ ಬಳಕೆ ಎಲ್​ಪಿಜಿ ಸಿಲಿಂಡರ್​ಗಳ ಬೆಲೆಯನ್ನು ಪ್ರತಿ ಯೂನಿಟ್​ಗೆ 50 ರೂ.ಗಳಷ್ಟು ಹೆಚ್ಚಿಸಿದ್ದವು. ಕಳೆದ ವರ್ಷ ಸೆಪ್ಟೆಂಬರ್ 1ರಂದು ವಾಣಿಜ್ಯ ಸಿಲಿಂಡರ್​ಗಳ ಬೆಲೆಯಲ್ಲಿ 91.50 ರೂಪಾಯಿ ಕಡಿಮೆ ಮಾಡಲಾಗಿತ್ತು.

ಇದನ್ನೂ ಓದಿ: ನಿಫ್ಟಿ ಐಟಿ ಇಂಡೆಕ್ಸ್​​ ಫಂಡ್​ ಬಿಡುಗಡೆ ಮಾಡಿದ ಆಕ್ಸಿಸ್​: ಹೂಡಿಕೆ ಮುನ್ನ ಈ ಬಗ್ಗೆ ಅರಿಯುವುದು ಅವಶ್ಯ!

ಶತಕ ಬಾರಿಸಿದ ಟೊಮೆಟೋ: ರಾಜ್ಯದೆಲ್ಲೆಡೆ ಟೊಮೆಟೊ ಬಂಗಾರದ ಬೆಲೆ ಬಂದಿದೆ. ಇದರಿಂದಾಗಿ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ. ಬೆಳಗಾವಿ ಜಿಲ್ಲೆಯಲ್ಲೂ ಟೊಮೆಟೊ ಮತ್ತು ಮೆಣಸಿನಕಾಯಿ ಬೆಲೆ ನೂರರ ಗಡಿ ದಾಟಿದ್ದು, ಗ್ರಾಹಕರ ಜೇಬಿಗೆ ಹೊರೆಯಾಗಿ ಪರಿಣಮಿಸಿದೆ. ಒಂದೆಡೆ ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆ ಮಳೆರಾಯನ ಆಗಮನಕ್ಕಾಗಿ ರೈತರು ಆಕಾಶದತ್ತ ಮುಖ ಮಾಡಿ ಕುಳಿತಿದ್ದಾರೆ‌. ಮತ್ತೊಂದೆಡೆ ಟೊಮೆಟೋ, ಮೆಣಸಿನಕಾಯಿ ಬೆಲೆ ಏರಿಕೆಯಾಗಿರುವುದು ಜನಸಾಮಾನ್ಯರನ್ನು ಚಿಂತೆಗೀಡು ಮಾಡಿದೆ.

ಜುಲೈ ತಿಂಗಳ ಮೊದಲ ವಾರ ಮುಗಿಯುತ್ತ ಬಂದರೂ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿರುವುದು ಕೃಷಿ ಚಟುವಟಿಕೆಗಳಿಗೆ ಯಾವುದೇ ಪ್ರಯೋಜನವಾಗಿಲ್ಲ. ಮಳೆ ಕೊರತೆ ಹಿನ್ನೆಲೆ ಬಹುತೇಕ ರೈತರು ಬಿತ್ತನೆ ಮಾಡದೇ ಕೈಕಟ್ಟಿ ಕುಳಿತುಕೊಳ್ಳುವಂತಾಗಿದೆ. ತರಕಾರಿ ಬೆಳೆಗಳು ಸಮರ್ಪಕ ಮಳೆಯಾಗದೇ ಇರುವುದರಿಂದ ಇಳುವರಿ ಕಡಿಮೆಯಾಗಿದೆ. ಪರಿಣಾಮ ಟೊಮೆಟೋ ಮತ್ತು ಹಸಿ ಮೆಣಸಿನಕಾಯಿ ಬೆಲೆ ಏರಿಕೆಯಾಗಿದೆ.

''ಬೆಲೆ ಏರಿಕೆಯಿಂದ ಬಡ ಜನರಿಗೆ ಸಾಕಷ್ಟು ಸಮಸ್ಯೆ ಆಗುತ್ತಿದೆ. ಕಾಂಗ್ರೆಸ್ ಪಕ್ಷದ ಮೇಲೆ ನಾವು ಭರವಸೆ ಇರಿಸಿದ್ದೆವು. ಮಹಿಳೆಯರಿಗೆ 2 ಸಾವಿರ ರೂ. ಕೊಡುವುದು ಮತ್ತು ಉಚಿತ ವಿದ್ಯುತ್ ಕೊಡುವುದಕ್ಕಿಂತ ಮೊದಲು ಸರ್ಕಾರ ಅವಶ್ಯಕ ವಸ್ತುಗಳ ಬೆಲೆ ಕಡಿಮೆ ಮಾಡಬೇಕು'' ಎಂದು ಗ್ರಾಹಕ ಮೆಹಬೂಬ್ ತಹಶೀಲ್ದಾರ್ ಒತ್ತಾಯಿಸಿದರು.

Last Updated : Jul 4, 2023, 7:51 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.