ETV Bharat / business

ಎಸ್​ಬಿಐ ಬ್ರಾಂಡ್ ಅಂಬಾಸಿಡರ್​ ಆದ ಕ್ರಿಕೆಟರ್ ಎಂಎಸ್ ಧೋನಿ - ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿ

ಖ್ಯಾತ ಕ್ರಿಕೆಟರ್ ಮಹೇಂದ್ರ ಸಿಂಗ್ ಧೋನಿ ಅವರು ಸ್ಟೇಟ್ ಬ್ಯಾಂಕ್ ಇಂಡಿಯಾದ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕವಾಗಿದ್ದಾರೆ.

State Bank of India signs MS Dhoni as brand ambassador

author img

By ETV Bharat Karnataka Team

Published : Oct 29, 2023, 6:05 PM IST

ಮುಂಬೈ : ಭಾರತದ ಅತಿದೊಡ್ಡ ವಾಣಿಜ್ಯ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಕ್ರಿಕೆಟ್ ಲೆಜೆಂಡ್​ ಮಹೇಂದ್ರ ಸಿಂಗ್ ಧೋನಿ ಅವರನ್ನು ತನ್ನ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಂಡಿರುವುದಾಗಿ ಘೋಷಿಸಿದೆ.

ಈ ಕುರಿತು ಮಾಹಿತಿ ನೀಡಿದ ಎಸ್​ಬಿಐ ಅಧ್ಯಕ್ಷ ದಿನೇಶ್ ಖರಾ, "ಎಂಎಸ್ ಧೋನಿ ಅವರನ್ನು ಎಸ್​ಬಿಐನ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಂಡಿರುವುದನ್ನು ತಿಳಿಸಲು ನಮಗೆ ಸಂತೋಷವಾಗುತ್ತಿದೆ. ಎಸ್​ಬಿಐನ ಸಂತೃಪ್ತ ಗ್ರಾಹಕರಾಗಿ ಬ್ಯಾಂಕ್​ನೊಂದಿಗೆ ಧೋನಿ ಒಡನಾಟ ಹೊಂದಿದ್ದು, ಈಗ ಅವರನ್ನು ನಮ್ಮ ಬ್ರಾಂಡ್​ ಅಂಬಾಸಿಡರ್​ ಆಗಿ ನೇಮಿಸಿದ್ಧೇವೆ. ಈ ಪಾಲುದಾರಿಕೆಯೊಂದಿಗೆ ನಂಬಿಕೆ, ಸಮಗ್ರತೆ ಮತ್ತು ಅಚಲ ಸಮರ್ಪಣೆಯೊಂದಿಗೆ ರಾಷ್ಟ್ರ ಮತ್ತು ನಮ್ಮ ಗ್ರಾಹಕರಿಗೆ ಸೇವೆ ಸಲ್ಲಿಸುವ ನಮ್ಮ ಬದ್ಧತೆಯನ್ನು ಬಲಪಡಿಸುವ ಗುರಿಯನ್ನು ನಾವು ಹೊಂದಿದ್ದೇವೆ." ಎಂದು ಹೇಳಿದರು.

ಎಸ್​ಬಿಐನ ಬ್ರಾಂಡ್ ಅಂಬಾಸಿಡರ್ ಆಗಿ ಎಂಎಸ್ ಧೋನಿ ವಿವಿಧ ಮಾರ್ಕೆಟಿಂಗ್ ಮತ್ತು ಪ್ರಚಾರ ಅಭಿಯಾನಗಳಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಒತ್ತಡದ ಸಂದರ್ಭಗಳಲ್ಲಿ ಸಂಯಮ ಕಾಪಾಡಿಕೊಳ್ಳುವ ಅವರ ಗಮನಾರ್ಹ ಸಾಮರ್ಥ್ಯ, ಸ್ಪಷ್ಟ ಚಿಂತನೆ ಮತ್ತು ಒತ್ತಡದಲ್ಲಿ ತ್ವರಿತ ನಿರ್ಧಾರ ತೆಗೆದುಕೊಳ್ಳುವ ಅವರ ಸಾಮರ್ಥ್ಯವು ದೇಶಾದ್ಯಂತದ ತನ್ನ ಗ್ರಾಹಕರು ಮತ್ತು ಮಧ್ಯಸ್ಥಗಾರರೊಂದಿಗೆ ಸಂಪರ್ಕ ಸಾಧಿಸಲು ಎಸ್​ಬಿಐಗೆ ಸಹಾಯಕವಾಗಲಿದೆ ಎಂದು ಬ್ಯಾಂಕ್ ಹೇಳಿದೆ.

ಈ ಸಹಯೋಗವು ತನ್ನ ಗ್ರಾಹಕರೊಂದಿಗೆ ಆಳವಾದ ಸಂಪರ್ಕ ಬೆಳೆಸುವ ಬ್ಯಾಂಕಿನ ಬದ್ಧತೆಯನ್ನು ಸಂಕೇತಿಸುತ್ತದೆ. ವಿಶ್ವಾಸಾರ್ಹತೆ ಮತ್ತು ನಾಯಕತ್ವದ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ ಎಂದು ಅದು ಹೇಳಿದೆ.

ಈ ತಿಂಗಳ ಆರಂಭದಲ್ಲಿ ಭಾರತದ ಮಾಜಿ ಕ್ರಿಕೆಟ್ ನಾಯಕ ಧೋನಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಜಿಯೋಮಾರ್ಟ್​ನ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡಿದ್ದರು. ಧೋನಿ 2023 ರಲ್ಲಿ ಓರಿಯೋ, ಇಂಡಿಯಾ ಸಿಮೆಂಟ್ಸ್, ಡ್ರೀಮ್ 11 ಮತ್ತು ರೀಬಾಕ್​ನಂಥ ಕಂಪನಿಗಳು ಮತ್ತು ಉತ್ಪನ್ನಗಳ ಬ್ರಾಂಡ್ ಅಂಬಾಸಿಡರ್ ಆಗಿ ಗುರುತಿಸಿಕೊಂಡಿದ್ದಾರೆ.

ಮಹೇಂದ್ರ ಸಿಂಗ್ ಧೋನಿ ವಿಶ್ವದ ಅತ್ಯಂತ ಪ್ರಸಿದ್ಧ ಕ್ರಿಕೆಟಿಗರಲ್ಲಿ ಒಬ್ಬರಾಗಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪಂದ್ಯಾವಳಿಗಳಲ್ಲಿ ಅತಿ ಹೆಚ್ಚು ರನ್, ಟೆಸ್ಟ್​ ನಾಯಕನಾಗಿ ಪಡೆದ ಅತಿ ಹೆಚ್ಚು ವಿಕೆಟ್​ ಮತ್ತು ಏಕದಿನ ಪಂದ್ಯಗಳಲ್ಲಿ ವೇಗದ ಅರ್ಧಶತಕ ಸೇರಿದಂತೆ ಅವರು ಹಲವಾರು ದಾಖಲೆಗಳನ್ನು ಹೊಂದಿದ್ದಾರೆ. ಅವರಿಗೆ 2009 ರಲ್ಲಿ ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ನೀಡಲಾಯಿತು.

ಇದನ್ನೂ ಓದಿ : ಯುಪಿಐ ಬೆಂಬಲಿಸುವ Nokia 105 Classic ಫೀಚರ್ ಫೋನ್ ಬಿಡುಗಡೆ: ಬೆಲೆ ಎಷ್ಟು ಗೊತ್ತಾ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.