ಮುಂಬೈ: ರಿಲಯನ್ಸ್ ಜಿಯೋ ನಿರ್ದೇಶಕ ಸ್ಥಾನದಿಂದ ಮುಖೇಶ್ ಅಂಬಾನಿ ಅವರು ಕೆಳಗಿಳಿದಿದ್ದು, ಅವರ ಪುತ್ರ ಆಕಾಶ್ ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪ್ರಕಟಣೆ ಹೊರಡಿಸಿದೆ.
ಮುಖೇಶ್ ಅಂಬಾನಿ ಜೂನ್ 27ರಂದು ರಿಲಯನ್ಸ್ ಜಿಯೋ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಇಂದು ಆಕಾಶ್ ಅಂಬಾನಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾಗಿ ಪ್ರಕಟಣೆಯಿಂದ ತಿಳಿದು ಬಂದಿದೆ. ಇದರ ಜೊತೆಗೆ ರಿಲಯನ್ಸ್ ಜಿಯೋದ ನಾನ್ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿ ಸಹ ನೇಮಕಗೊಂಡಿದ್ದಾರೆ.
ಇದನ್ನೂ ಓದಿ: ರಾಜ್ಯದ ಜನರಿಗೆ ವಿದ್ಯುತ್ ದರ ಏರಿಕೆ ಶಾಕ್: ಜು.1ರಿಂದ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ ಬರೆ
ಮುಂದಿನ ಐದು ವರ್ಷಗಳ ಅವಧಿಗೆ ರಿಲಯನ್ಸ್ ಜಿಯೋದ ವ್ಯವಸ್ಥಾಪಕ ನಿರ್ದೇಶಕರಾಗಿ ಪಂಕಜ್ ಮೋಹನ್ ಪವಾರ್ ನೇಮಕಕ್ಕೆ ಅನುಮೋದನೆ ನೀಡಲಾಗಿದೆ. ಭಾರತೀಯ ಟೆಲಿಕಾಂ ಇಂಡಸ್ಟ್ರೀಯಲ್ಲಿ ರಿಲಯನ್ಸ್ ಜಿಯೋ ಅತಿದೊಡ್ಡ ಟೆಲಿಕಾಂ ಆಪರೇಟರ್ ಕಂಪನಿಯಾಗಿದ್ದು, ಏಪ್ರಿಲ್ ಅಂತ್ಯದವರೆಗೆ 16.8 ಲಕ್ಷ ಚಂದಾದಾರರನ್ನು ಹೊಂದಿದೆ.