ETV Bharat / business

2 ವರ್ಷದ ಬಳಿಕ ರೆಪೊ ದರ ಹೆಚ್ಚಳ: ಶೇ.4.40ಕ್ಕೆ ಏರಿಸಿ ಆರ್‌ಬಿಐ ಘೋಷಣೆ - ಆರ್​ಬಿಐ ಮುಖ್ಯಸ್ಥ ಶಕ್ತಿಕಾಂತ್​ ದಾಸ್​ ಸುದ್ದಿಗೋಷ್ಠಿ

ದೇಶದಲ್ಲಿ ಹಣದುಬ್ಬರವನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರೆಪೊ ದರವನ್ನು ಶೇ.4.40 ಕ್ಕೆ ಹೆಚ್ಚಿಸಿ ಆರ್​ಬಿಐ ಘೋಷಿಸಿದೆ.

rbi-hikes-repo
ಆರ್‌ಬಿಐ ಘೋಷಣೆ
author img

By

Published : May 4, 2022, 3:04 PM IST

Updated : May 4, 2022, 3:38 PM IST

ನವದೆಹಲಿ: ಹೆಚ್ಚುತ್ತಿರುವ ಹಣದುಬ್ಬರವನ್ನು ನಿಯಂತ್ರಿಸುವ ಉದ್ದೇಶದಿಂದ ರೆಪೊ ದರವನ್ನು 2020ರ ಬಳಿಕ ಇದೇ ಮೊದಲ ಬಾರಿಗೆ ಹೆಚ್ಚಳ ಮಾಡಲಾಗಿದೆ. ರೆಪೊ ದರದ 40 ಮೂಲಾಂಶವನ್ನು ಶೇ 4.40ಕ್ಕೆ ಹೆಚ್ಚಿಸಲಾಗಿದೆ. ಅಲ್ಲದೇ ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್ ಘೋಷಿಸಿದೆ.

ಈ ಬಗ್ಗೆ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಆರ್​ಬಿಐ ಗವರ್ನರ್​ ಶಕ್ತಿಕಾಂತ್​ ದಾಸ್​, ಜಾಗತಿಕ ಆರ್ಥಿಕ ಅಸ್ಥಿರತೆ ನಡುವೆಯೂ ಭಾರತೀಯ ಆರ್ಥಿಕತೆ ಸ್ಥಿರವಾಗಿದೆ. ಹಣದುಬ್ಬರವನ್ನು ನಿಯಂತ್ರಿಸುವ ಸಲುವಾಗಿ ರೆಪೋ ದರವನ್ನು ಹೆಚ್ಚಳ ಮಾಡಲಾಗಿದೆ. 40 ರ ಮೂಲಾಂಶದಲ್ಲಿ ಶೇ.4.44 ಪೈಸೆ ಏರಿಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ವಿತ್ತೀಯ ನೀತಿ ಸಮಿತಿ (ಎಂಪಿಸಿ) ಈ ಬಗ್ಗೆ ಸಭೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ. ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರವನ್ನು ತಗ್ಗಿಸುವ ನಿಟ್ಟಿನಲ್ಲಿ ಭೌಗೋಳಿಕ- ರಾಜಕೀಯ ಉದ್ವಿಗ್ನತೆ, ಕಚ್ಚಾ ತೈಲ ಬೆಲೆಗಳ ಏರಿಕೆ ಮತ್ತು ಜಾಗತಿಕವಾಗಿ ಸರಕುಗಳ ಕೊರತೆಯು ಭಾರತದ ಆರ್ಥಿಕತೆಯ ಮೇಲೆ ಪರಿಣಾಮ ಬೀರಿರುವ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಲಾಗಿದೆ ಎಂದು ಅವರು ಹೇಳಿದರು.

ಕ್ಯಾಶ್ ರಿಸರ್ವ್ ರೇಷಿಯೊವನ್ನು ಬೇಡಿಕೆಯ ಅನುಗುಣವಾಗಿ ಶೇ 4.5ಕ್ಕೆ ಹೆಚ್ಚಿಸಲಾಗಿದೆ. ಇದು 2022ರ ಮೇ 21ರಿಂದ ಜಾರಿಗೆ ಬರಲಿದೆ ಎಂದೂ ಶಕ್ತಿಕಾಂತ್​ ದಾಸ್​ ಮಾಹಿತಿ ನೀಡಿದರು.

ಓದಿ: 39 ಸಾವಿರ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ ಅಂಚೆ ಕಚೇರಿ.. 10th ಪಾಸ್ ಆ​ದವರಿಗೆ ಒಳ್ಳೆಯ ಅವಕಾಶ!

Last Updated : May 4, 2022, 3:38 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.