ETV Bharat / business

ಸ್ವದೇಶಿ ಕಂಪ್ಯೂಟರ್ ಚಿಪ್ ತಯಾರಿಸಲಿದೆ ಟಾಟಾ ಗ್ರೂಪ್ - etv bharat kannada

ಎಲೆಕ್ಟ್ರಾನಿಕ್ಸ್ ಉದ್ಯಮದಲ್ಲಿನ ಬಂಡವಾಳ ಹೂಡಿಕೆಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಒತ್ತು ನೀಡುತ್ತಿರುವ ಸಮಯದಲ್ಲಿಯೇ ಟಾಟಾ ಕಂಪನಿಯ ಈ ಹೇಳಿಕೆಗಳು ಮಹತ್ವ ಪಡೆದುಕೊಂಡಿವೆ.

ಸ್ವದೇಶಿ ಕಂಪ್ಯೂಟರ್ ಚಿಪ್ ತಯಾರಿಸಲಿದೆ ಟಾಟಾ ಗ್ರೂಪ್
Tata Group to manufacture indigenous computer chips
author img

By

Published : Dec 9, 2022, 12:28 PM IST

ನವದೆಹಲಿ: ಟಾಟಾ ಗ್ರೂಪ್ ಕೆಲವೇ ವರ್ಷಗಳಲ್ಲಿ ಭಾರತದಲ್ಲಿ ತನ್ನದೇ ಆದ ಕಂಪ್ಯೂಟರ್ ಚಿಪ್‌ಸೆಟ್‌ಗಳನ್ನು ತಯಾರಿಸಲು ಪ್ರಯತ್ನಿಸಲಿದೆ ಎಂದು ಕಂಪನಿ ತಿಳಿಸಿದೆ. ಕಂಪನಿ ಈಗಾಗಲೇ ಚಿಪ್ ತಯಾರಿಸುತ್ತಿರುವ ಕಂಪನಿಗಳೊಂದಿಗೆ ಪಾಲುದಾರಿಕೆ ಮಾಡಿಕೊಳ್ಳಲು ಅನೇಕ ಕಂಪನಿಗಳೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಟಾಟಾ ಸನ್ಸ್ ಅಧ್ಯಕ್ಷ ನಟರಾಜನ್ ಚಂದ್ರಶೇಖರನ್ ತಿಳಿಸಿರುವುದಾಗಿ ಮಾಧ್ಯಮವೊಂದರ ಹೊಸ ವರದಿ ಹೇಳಿದೆ.

ಕಂಪನಿಯು ಟಾಟಾ ಎಲೆಕ್ಟ್ರಾನಿಕ್ಸ್​ ಅಂಗಸಂಸ್ಥೆಯನ್ನು ಸ್ಥಾಪಿಸಲಿದ್ದು, ಇದರ ಅಡಿ ಸೆಮಿಕಂಡಕ್ಟರ್ ಅಸೆಂಬ್ಲಿ ಟೆಸ್ಟಿಂಗ್ ಉದ್ಯಮ ಸ್ಥಾಪಿಸಲಿದೆ. ಟಾಟಾ ಈ ವರ್ಷದ ಜೂನ್‌ನಲ್ಲಿ ಟೋಕಿಯೊ ಮೂಲದ ರೆನೆಸಾಸ್ ಎಲೆಕ್ಟ್ರಾನಿಕ್ಸ್‌ನೊಂದಿಗೆ ಪಾಲುದಾರಿಕೆಯನ್ನು ಈಗಾಗಲೇ ಘೋಷಿಸಿದೆ. ಇದು ಸೆಮಿಕಂಡಕ್ಟರ್ ವಿನ್ಯಾಸ ಮತ್ತು ಅಭಿವೃದ್ಧಿಯನ್ನು ಆಧರಿಸಿದೆ. ಎಲೆಕ್ಟ್ರಿಕ್ ವಾಹನಗಳು ಸೇರಿದಂತೆ ಉದಯೋನ್ಮುಖ ಕ್ಷೇತ್ರಗಳಲ್ಲಿ ಹೊಸ ವ್ಯವಹಾರಗಳನ್ನು ಪ್ರಾರಂಭಿಸಲು ಕಂಪನಿಯು ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.

ಒಟ್ಟಾರೆಯಾಗಿ ಎಲೆಕ್ಟ್ರಾನಿಕ್ಸ್ ಉದ್ಯಮದಲ್ಲಿನ ಬಂಡವಾಳ ಹೂಡಿಕೆಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಒತ್ತು ನೀಡುತ್ತಿರುವ ಸಮಯದಲ್ಲಿಯೇ ಟಾಟಾ ಕಂಪನಿಯ ಈ ಹೇಳಿಕೆಗಳು ಮಹತ್ವ ಪಡೆದುಕೊಂಡಿವೆ. 2025-26 ರ ವೇಳೆಗೆ ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಉತ್ಪಾದನೆಯನ್ನು 300 ಬಿಲಿಯನ್ ಡಾಲರ್‌ಗೆ ಹೆಚ್ಚಿಸುವ ಗುರಿಯನ್ನು ಪ್ರಧಾನಿ ಹೊಂದಿದ್ದಾರೆ ಎಂದು ಕಳೆದ ತಿಂಗಳು ಉದ್ಯಮಶೀಲತೆ, ಕೌಶಲ್ಯ ಅಭಿವೃದ್ಧಿ, ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನದ ಕೇಂದ್ರ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದರು.

ನಾವು ಪ್ರಮುಖ ತಂತ್ರಜ್ಞಾನಗಳ ಆವಿಷ್ಕಾರಕ್ಕೆ ಯತ್ನಿಸುತ್ತಿಲ್ಲ. ಆದರೆ, ಪ್ರಾಯೋಜಕರ ಗುಣಮಟ್ಟ, ಪ್ರಕ್ರಿಯೆ ತಂತ್ರಜ್ಞಾನ ಮತ್ತು ಸಾಮರ್ಥ್ಯಗಳನ್ನು ಬೆಂಬಲಿಸುವ 28 ನ್ಯಾನೋಮೀಟರ್ ಅಥವಾ 65 ನ್ಯಾನೋಮೀಟರ್ ಸೆಮಿಕಂಡಕ್ಟರ್ ವ್ಯವಹಾರ ಮಾದರಿಯ ಬಗ್ಗೆ ನಾವು ನೋಡುತ್ತಿದ್ದೇವೆ. ನಾವು ಶೀಘ್ರದಲ್ಲೇ ಅನುಮೋದಿತ ಪ್ರಸ್ತಾವನೆಯನ್ನು ಹೊರತರುತ್ತೇವೆ ಎಂದು ಸಚಿವರು ಹೇಳಿದ್ದರು.

ಸದ್ಯದ ಪರಿಸ್ಥಿತಿಯಲ್ಲಿ ಸೆಮಿಕಂಡಕ್ಟರ್ ಉತ್ಪಾದನೆಯು ಹೆಚ್ಚಾಗಿ ಚೀನಾ ಕೇಂದ್ರೀಕೃತವಾಗಿದೆ. ಆದರೆ, ಕೋವಿಡ್ ಬಿಕ್ಕಟ್ಟಿನ ಸಂದರ್ಭವು ಜಾಗತಿಕ ಪೂರೈಕೆ ಸರಪಳಿಗಳಲ್ಲಿ ಬದಲಾವಣೆಯ ಅಗತ್ಯವನ್ನು ಸೂಚಿಸಿದೆ. ವಿಶೇಷವಾಗಿ ಎಲೆಕ್ಟ್ರಿಕ್ ವಾಹನಗಳ (ಇವಿ) ಬೆಳವಣಿಗೆಯೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿ ಚಿಪ್‌ಗಳ ಅಗತ್ಯತೆ ಹೆಚ್ಚುತ್ತಿದೆ. ವಾಸ್ತವವಾಗಿ, ಟಾಟಾ ಈಗಾಗಲೇ ಭಾರತದಲ್ಲಿ ಹಲವಾರು ವಿಭಿನ್ನ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಿದೆ ಮತ್ತು ಈ ಉದ್ಯಮದ ಪ್ರಮುಖ ಕಂಪನಿಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: ರತನ್ ಟಾಟಾ ಬಯೋಪಿಕ್‌ಗೆ ಸುಧಾ ಕೊಂಗರ ನಿರ್ದೇಶನ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.