ನವದೆಹಲಿ: ಟಾಟಾ ಮೋಟಾರ್ಸ್ ಮತ್ತು ಪಶ್ಚಿಮಬಂಗಾಳ ಸರ್ಕಾರದ ನಡುವಿನ ಸಿಂಗೂರ್ ಘಟಕ ವ್ಯಾಜ್ಯ ಕಡೆಗೂ ಇತ್ಯರ್ಥ ಕಂಡಿದೆ. ನ್ಯಾನೋ ಕಾರು ಉತ್ಪಾದನಾ ಘಟಕವನ್ನು ಸ್ಥಳಾಂತರಿಸಿದ್ದಕ್ಕಾಗಿ ಉಂಟಾದ ನಷ್ಟವನ್ನು ಭರಿಸಲು ಕೋರಿದ್ದ ಟಾಟಾ ಮೋಟಾರ್ಸ್ಗೆ, ಸಿಎಂ ಮಮತಾ ಬ್ಯಾನರ್ಜಿ ಅವರ ಸರ್ಕಾರ 766 ಕೋಟಿ ರೂಪಾಯಿ ಪರಿಹಾರವಾಗಿ ನೀಡಬೇಕು ಎಂದು ಮಧ್ಯಸ್ಥಿಕೆ ನ್ಯಾಯಮಂಡಳಿಯು ಸೋಮವಾರ ಆದೇಶಿಸಿದೆ.
-
Singur Plant case | Tata Motors says, "The aforesaid pending arbitral proceedings before a three-member Arbitral Tribunal has now been finally disposed of by a unanimous award in favour of Tata Motors Limited (TML) whereby the claimant (TML) has been held to be entitled to… pic.twitter.com/ivr34191GM
— ANI (@ANI) October 30, 2023 " class="align-text-top noRightClick twitterSection" data="
">Singur Plant case | Tata Motors says, "The aforesaid pending arbitral proceedings before a three-member Arbitral Tribunal has now been finally disposed of by a unanimous award in favour of Tata Motors Limited (TML) whereby the claimant (TML) has been held to be entitled to… pic.twitter.com/ivr34191GM
— ANI (@ANI) October 30, 2023Singur Plant case | Tata Motors says, "The aforesaid pending arbitral proceedings before a three-member Arbitral Tribunal has now been finally disposed of by a unanimous award in favour of Tata Motors Limited (TML) whereby the claimant (TML) has been held to be entitled to… pic.twitter.com/ivr34191GM
— ANI (@ANI) October 30, 2023
ಪಶ್ಚಿಮಬಂಗಾಳದ ಸಿಂಗೂರಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ನ್ಯಾನೋ ಕಾರು ಉತ್ಪಾದನಾ ಘಟಕ ಸ್ಥಾಪನೆಗೆ ಮುಂದಾಗಿತ್ತು. ಆದರೆ, ಇದರ ವಿರುದ್ಧ ಅಂದಿನ ವಿರೋಧ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಅವರು ಹೋರಾಟ ನಡೆಸಿದ್ದರು. ಇದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಸ್ಥಾವರವನ್ನು ಬಂದ್ ಮಾಡಿಸಲಾಗಿತ್ತು. ಆದರೆ, ಇದರ ವಿರುದ್ಧ ಟಾಟಾ ನಷ್ಟ ಪರಿಹಾರ ನೀಡಲು ಕೋರಿತ್ತು.
ಇದರ ವಿಚಾರಣೆ ನಡೆಸಿದ ಮೂವರು ಸದಸ್ಯರ ಆರ್ಬಿಟ್ರಲ್ ಟ್ರಿಬ್ಯುನಲ್ (ಮಧ್ಯಸ್ಥಿಕೆ ನ್ಯಾಯಮಂಡಳಿ) ಶೇ.11ರ ಬಡ್ಡಿ ದರದಲ್ಲಿ ಒಟ್ಟು 766 ಕೋಟಿ ರೂಪಾಯಿಗಳನ್ನು ಟಾಟಾ ಮೋಟಾರ್ಸ್ಗೆ, ಪಶ್ಚಿಮಬಂಗಾಳದ ಕೈಗಾರಿಕೆ ಮತ್ತು ಅಭಿವೃದ್ಧಿ ನಿಗಮ ಪರಿಹಾರವಾಗಿ ನೀಡಬೇಕು ಎಂದು ಆದೇಶಿಸಿತು.
ಪ್ರಕರಣದ ಹಿನ್ನೆಲೆ: ಟಾಟಾ ಮೋಟಾರ್ಸ್ ಸಿಂಗೂರಿನಲ್ಲಿ ನ್ಯಾನೋ ಕಾರುಗಳ ಉತ್ಪಾದನಾ ಘಟಕ ಆರಂಭಿಸಲು ಅಂದಿನ ಸಿಪಿಎಂ ಸರ್ಕಾರದ ಜೊತೆಗೆ ಒಪ್ಪಂದ ಮಾಡಿಕೊಂಡಿತ್ತು. ಅದರಂತೆ ಭೂಸ್ವಾಧೀನ ಪ್ರಕ್ರಿಯೆಯನ್ನೂ ನಡೆಸಿತ್ತು. 1 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಕಾರ್ಯಗಳು ಆರಂಭವಾಗಿದ್ದವು. ಆದರೆ, 2008 ರಲ್ಲಿ ಭೂ ವಿವಾದದ ವಿರುದ್ಧ ಈಗಿನ ಸಿಎಂ ಮಮತಾ ಬ್ಯಾನರ್ಜಿ ಅವರು ಹೋರಾಟ ನಡೆಸಿದ್ದರು. ರೈತರ ಭೂಮಿಯನ್ನು ಕಿತ್ತುಕೊಳ್ಳಲಾಗಿದೆ ಎಂದು ಆರೋಪಿಸಿ ಚಳುವಳಿ ಆರಂಭಿಸಿದ್ದರು. ಇದರಿಂದ ಅದೇ ವರ್ಷ ನ್ಯಾನೋ ಕಾರು ಉತ್ಪಾದನೆ ಘಟಕ ಸ್ಥಗಿತಗೊಂಡಿತ್ತು.
ಟಾಟಾ ಕಂಪನಿಗೆ ನೀಡಲಾಗಿರುವ ಭೂಮಿಯನ್ನು ಮರಳಿ ರೈತರಿಗೆ ನೀಡಬೇಕು ಎಂದು 2011 ರಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮಮತಾ ಬ್ಯಾನರ್ಜಿ ಅವರು ಸುಗ್ರೀವಾಜ್ಞೆ ಮೂಲಕ ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ಟಾಟಾ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. 2016 ರಲ್ಲಿ ಈ ಬಗ್ಗೆ ತೀರ್ಪು ನೀಡಿದ ಕೋರ್ಟ್, ಒಪ್ಪಂದವನ್ನು ರದ್ದು ಮಾಡಿ, ರೈತರಿಗೆ ಭೂಮಿ ವಾಪಸ್ ನೀಡಲು ತಿಳಿಸಿತು. ಆದರೆ, ಘಟಕ ಆರಂಭಕ್ಕಾದ ವೆಚ್ಚವನ್ನು ಭರಿಸಿಕೊಡಬೇಕು ಎಂದು ಟಾಟಾ ಕಂಪನಿ ಮಧ್ಯಸ್ಥಿಕೆ ನ್ಯಾಯಮಂಡಳಿಗೆ ಕೋರಿತ್ತು.
ಇದೀಗ ವಿಚಾರಣೆ ಮುಗಿಸಿರುವ ಟ್ರಿಬ್ಯುನಲ್, ಪ್ರತಿವಾದಿಯಾಗಿರುವ ಪಶ್ಚಿಮ ಬಂಗಾಳದ ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್‌ನಿಂದ (ಡಬ್ಲ್ಯುಬಿಐಡಿಸಿ) 765.78 ಕೋಟಿ ರೂಪಾಯಿಗಳನ್ನು ವಾರ್ಷಿಕ ಶೇ 11 ರ ಬಡ್ಡಿ ಸೇರಿಸಿ ಟಾಟಾ ಮೋಟಾರ್ಸ್ಗೆ ಪರಿಹಾರ ನೀಡಲು ಸೂಚಿಸಿದೆ. ಇದು ಸೆಪ್ಟೆಂಬರ್ 1, 2016 ರಿಂದ ಅನ್ವಯವಾಗುವಂತೆ ಆದೇಶಿಸಿದೆ. ಜೊತೆಗೆ ಟಾಟಾ ಮೋಟಾರ್ಸ್ ಪ್ರತಿವಾದಿಯಿಂದ 1 ಕೋಟಿ ರೂ.ಗಳನ್ನು ಪ್ರಕ್ರಿಯೆಗಳ ವೆಚ್ಚವಾಗಿ ಪಡೆದುಕೊಳ್ಳಬಹುದು ಎಂದಿದೆ.
ಗುಜರಾತ್ನಲ್ಲಿ ಘಟಕ: ಪಶ್ಚಿಮಬಂಗಾಳದ ಸಿಂಗೂರಿನಿಂದ ಸ್ಥಳಾಂತರಗೊಂಡ ಟಾಟಾ ಮೋಟಾರ್ಸ್ ಘಟಕ 2010 ರಲ್ಲಿ ಗುಜರಾತ್ಗೆ ಸ್ಥಳಾಂತಗೊಂಡಿತು. ಸನಂದ್ನಲ್ಲಿ ಸ್ಥಾವರ ಆರಂಭಕ್ಕೆ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಟಾಟಾ ಗ್ರೂಪ್ ಅಧ್ಯಕ್ಷ ರತನ್ ಟಾಟಾ ಮಧ್ಯೆ ಒಪ್ಪಂದ ಏರ್ಪಟ್ಟಿತ್ತು.
ಇದನ್ನೂ ಓದಿ: ದೇಶದಲ್ಲಿ ಈರುಳ್ಳಿ ದರ ಹೇಗಿದೆ?: ಬೆಲೆ ಏರಿಕೆ ವದಂತಿಗೆ ಕೇಂದ್ರ ಸರ್ಕಾರದಿಂದ ಅಂಕಿಅಂಶ ಬಿಡುಗಡೆ