ETV Bharat / business

ಕೇಂದ್ರ ಬಜೆಟ್​​ : ರೈಲ್ವೆ ಇಲಾಖೆಗೆ 2.40 ಲಕ್ಷ ಕೋಟಿ ರೂ. ಮೀಸಲು - ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ರೈಲ್ವೆ ಇಲಾಖೆಗೆ 2.40 ಲಕ್ಷ ಕೋಟಿ ರೂ. ಮೀಸಲು - 50 ಹೆಚ್ಚುವರಿ ವಿಮಾನ ನಿಲ್ದಾಣಗಳ ಅಭಿವೃದ್ಧಿ - 400 ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್

Union Budget 2023
ರೈಲ್ವೆ ಇಲಾಖೆಗೆ 2.40 ಲಕ್ಷ ಕೋಟಿ ರೂ. ಮೀಸಲು
author img

By

Published : Feb 1, 2023, 12:07 PM IST

Updated : Feb 1, 2023, 2:31 PM IST

ನವದೆಹಲಿ : ರೈಲ್ವೆಗೆ 2.40 ಲಕ್ಷ ಕೋಟಿ ರೂ ಗಳ ಬಂಡವಾಳ ಒದಗಿಸಲಾಗಿದ್ದು, ಇದು 2013-14ರ ಹಣಕಾಸು ವರ್ಷದಲ್ಲಿ ಮಾಡಿದ ವೆಚ್ಚದ ಒಂಬತ್ತು ಪಟ್ಟು ಹೆಚ್ಚು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಕಲ್ಲಿದ್ದಲು, ರಸಗೊಬ್ಬರ ಮತ್ತು ಆಹಾರ ಧಾನ್ಯ ಕ್ಷೇತ್ರಗಳನ್ನು ಪರಸ್ಪರ ಸಂಪರ್ಕಿಸಲು 100 ನಿರ್ಣಾಯಕ ಸಾರಿಗೆ ಯೋಜನೆಗಳನ್ನು ಗುರುತಿಸಲಾಗಿದೆ. ಈ ಯೋಜನೆಗೆ ಸುಮಾರು 75,000 ಕೋಟಿ ಹೂಡಿಕೆ ಮಾಡಲಾಗುವುದು. ಇದರಲ್ಲಿ 15,000 ಕೋಟಿ ಖಾಸಗಿ ಮೂಲಗಳಿಂದ ಆದ್ಯತೆಯನುಸಾರ ಪಡೆದುಕೊಳ್ಳಲಾಗುವುದು ಎಂದು ತಿಳಿಸಿದರು.

ರೈಲ್ವೇ ಪ್ರಯಾಣಿಕರನ್ನು ಗಮದಲ್ಲಿಟ್ಟುಕೊಂಡು ರಾಜಧಾನಿ, ಶತಾಬ್ದಿ, ಡುರೊಂಟೊ, ಹಮ್ಸಾಫರ್ ಮತ್ತು ತೇಜಸ್‌ನಂತಹ ಪ್ರೀಮಿಯರ್ ರೈಲುಗಳ 1,000ಕ್ಕೂ ಹೆಚ್ಚು ಬೋಗಿಗಳನ್ನು ನವೀಕರಿಸಲಾಗುತ್ತದೆ. ಈ ಬೋಗಿಗಳನ್ನು ಪ್ರಯಾಣಿಕರಿಗೆ ಅನುಕೂಲವಾಗುವಂತೆ ನಿರ್ಮಿಸಲಾಗುತ್ತದೆ ಎಂದು ಹೇಳಿದರು.

ರೈಲುಗಳ ವೇಗವನ್ನು ಹೆಚ್ಚಿಸಲು ಹಲವು ಕಡೆಗಳಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಾರಂಭಿಸಲು ರೈಲ್ವೆಯು ಯೋಜನೆ ರೂಪಿಸಿದೆ. ಇದಕ್ಕೆ ಪೂರಕವಾಗಿ ಹಳೆಯ ಹಳಿಗಳನ್ನು ಬದಲಾಯಿಸಲು ಬೇಕಾದ ಕ್ರಮಕೈಗೊಳ್ಳಲಾಗುತ್ತದೆ. ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ ರೈಲ್ವೆಯು ಇನ್ನೂ 100 ವಿಸ್ಟಾಡೋಮ್ ಕೋಚ್‌ಗಳನ್ನು ತಯಾರಿಸಲು ಮುಂದಾಗಿದೆ ಸಚಿವೆ ನಿರ್ಮಲಾ ಸೀತಾರಾಮನ್​ ಹೇಳಿದರು.

ಇನ್ನು ಬಜೆಟ್‌ನಲ್ಲಿ, 35 ಹೈಡ್ರೋಜನ್ ಇಂಧನ ಆಧಾರಿತ ರೈಲುಗಳು, 4,500 ಹೊಸದಾಗಿ ವಿನ್ಯಾಸಗೊಳಿಸಲಾದ ಆಟೋಮೊಬೈಲ್ ಕ್ಯಾರಿಯರ್ ಕೋಚ್‌ಗಳು, 5000 ಎಲ್​ಹೆಚ್​ಬಿ ಕೋಚ್‌ಗಳು ಮತ್ತು 58000 ವ್ಯಾಗನ್‌ಗಳನ್ನು ತಯಾರಿಸಲು ಸರ್ಕಾರ ಪ್ರಸ್ತಾಪಿಸಿದೆ. 2023ರ ಕೇಂದ್ರ ಬಜೆಟ್‌ನಲ್ಲಿ ರೈಲ್ವೆಗೆ 1.4 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿದ್ದು, ಇದರಲ್ಲಿ 1.37 ಲಕ್ಷ ಕೋಟಿ ಬಂಡವಾಳ ವೆಚ್ಚ ಮತ್ತು 3,267 ಲಕ್ಷ ಕೋಟಿ ಆದಾಯ ವೆಚ್ಚಕ್ಕೆ ಮೀಸಲಿಡಲಾಗಿದೆ.

ರೈಲ್ವೆಗೆ ಬಂಪರ್ ​: ರೈಲ್ವೆ ಇಲಾಖೆಗೆ 2.40 ಲಕ್ಷ ಕೋಟಿ ರೂ. ಮೀಸಲಿಡಲಾಗಿದ್ದು, 10 ಲಕ್ಷ ಕೋಟಿ ಮೂಲ ಬಂಡವಾಳ ಹೂಡಿಕೆ ಮಾಡಲಾಗುತ್ತದೆ. ಇದು ಭಾರತದ ಇತಿಹಾಸದಲ್ಲಿಯೇ ಅತಿದೊಡ್ಡ ಹೂಡಿಕೆಯಾಗಿದೆ. ರಾಜ್ಯ ಸರ್ಕಾರಗಳಿಗೆ ಸಾಲ ಸೌಲಭ್ಯ ಇನ್ನೊಂದು ವರ್ಷ ಮುಂದುವರಿಕೆಯಾಗಲಿದೆ ಎಂದು ಹೇಳಿದ್ದಾರೆ. 75 ಸಾವಿರ ಕೋಟಿ ರೂಗಳನ್ನು ಹೊಸ ರೈಲ್ವೇ ಯೋಜನೆಗೆ ಘೋಷಣೆ ಮಾಡಿದ್ದಾರೆ.

ಜೊತೆಗೆ 400 ಹೊಸ ವಂದೇ ಭಾರತ್ ರೈಲುಗಳನ್ನು ಪರಿಚಯಿಸಲಾಗುವುದು ಎಂದು ಹೇಳಿದರು. ಈ ರೈಲುಗಳನ್ನು ಮುಂದಿನ ಮೂರು ವರ್ಷಗಳಲ್ಲಿ ನಿರ್ಮಿಸಲಾಗುತ್ತದೆ ಎಂದು ತಮ್ಮ ಬಜೆಟ್​ ಭಾಷಣದಲ್ಲಿ ವಿವರಿಸಿದರು.

50 ಹೆಚ್ಚುವರಿ ವಿಮಾನ ನಿಲ್ದಾಣಗಳ ಅಭಿವೃದ್ಧಿ : ಒಟ್ಟು 50 ಹೆಚ್ಚುವರಿ ವಿಮಾನ ನಿಲ್ದಾಣಗಳನ್ನು ಪುನಶ್ಚೇತನಗೊಳಿಸಲಾಗುವುದು.

ಇದನ್ನೂ ಓದಿ : ಮಹಿಳಾ ಸಮ್ಮಾನ್​ ಯೋಜನೆ ಘೋಷಣೆ: 2 ಲಕ್ಷವರೆಗೆ ಠೇವಣಿ ಇಡುವ ಅವಕಾಶ

Last Updated : Feb 1, 2023, 2:31 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.