ಚಿಕ್ಕೋಡಿ(ಬೆಳಗಾವಿ): ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯಲ್ಲಿ 17 ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಚಿಕ್ಕೋಡಿ ಡಿಡಿಪಿಐ ಗಜಾನನ ಮನ್ನಿಕೇರಿ ತಿಳಿಸಿದ್ದಾರೆ.
ಆಗಸ್ಟ್ ತಿಂಗಳಲ್ಲಿ ವಿದ್ಯಾಗಮ ಕಾರ್ಯಕ್ರಮ ಆರಂಭವಾಗಿದ್ದು, ಆ ಬಳಿಕ 35 ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಕಡಿಮೆ ಸಂಖ್ಯೆಯ ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದರೂ ಸಾವಿನ ಪ್ರಮಾಣ ಹೆಚ್ಚಾಗಿದೆ. ಅಥಣಿ, ಚಿಕ್ಕೋಡಿ, ಕಾಗವಾಡದಲ್ಲಿ ತಲಾ ಒಬ್ಬೊಬ್ಬರು, ಹುಕ್ಕೇರಿಯಲ್ಲಿ ಮೂವರು, ಮೂಡಲಗಿಯಲ್ಲಿ ಐವರು, ನಿಪ್ಪಾಣಿಯಲ್ಲಿ ನಾಲ್ವರು ಹಾಗೂ ಗೋಕಾಕ್ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ವಿದ್ಯಾಗಮ ಆರಂಭದ ನಂತರ ಹತ್ತಕ್ಕೂ ಹೆಚ್ಚು ಶಿಕ್ಷಕರು ಮೃತಪಟ್ಟಿದ್ದು, ವಿದ್ಯಾರ್ಥಿಗಳ ಬಗ್ಗೆ ಮಾಹಿತಿಯಿಲ್ಲ ಎಂದು ದೂರವಾಣಿ ಮೂಲಕ ತಿಳಿಸಿದ್ದಾರೆ.