ಬೆಳಗಾವಿ: ಅಕ್ರಮವಾಗಿ ಸಾಗಿಸುತ್ತಿದ್ದ ಕಂಟ್ರಿ ಸಾರಾಯಿಯನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಸಪ್ಪ ನಾಯಕ ಹಾಗೂ ಲಗಮಣ್ಣ ನಾಯಕ ಬಂಧಿತ ಆರೋಪಿಗಳು. ಈ ಇಬ್ಬರೂ ಆರೋಪಿಗಳು ಮಹಾರಾಷ್ಟ್ರ ನೋಂದಣಿ ಇರುವ ಕಾರಿನಲ್ಲಿ 200 ಲೀಟರ್ ಪ್ರಮಾಣದ ಮದ್ಯದ ಟ್ಯೂಬ್ಗಳನ್ನು ಸಾಗಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಗರದ ಹೊರವಲಯದಲ್ಲಿ ಬೆಳಗಾವಿ ಉಪ ವಿಭಾಗದ ಅಬಕಾರಿ ಪೊಲೀಸರು ದಾಳಿ ನಡೆಸಿದರು.ದಾಳಿ ವೇಳೆ ಮದ್ಯ ಪತ್ತೆಯಾಗಿದ್ದು, ಇಬ್ಬರು ಆರೋಪಿಗಳು ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.