ಬೆಳಗಾವಿ: ಜಿಲ್ಲೆಯಲ್ಲಿ ಒಂದೇ ದಿನಕ್ಕೆ ದಾಖಲೆಯ ಪ್ರಮಾಣದಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇಂದು 219 ಜನರಿಗೆ ಸೋಂಕು ತಗುಲಿದ್ದು, ಜಿಲ್ಲೆಯ ಜನರನ್ನು ಆತಂಕಕ್ಕೆ ದೂಡಿದೆ.
ಈವರೆಗೂ 1,315 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 30 ಮಂದಿ ಮೃತಪಟ್ಟಿದ್ದಾರೆ. ಈವರೆಗೆ 426 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 859 ಸಕ್ರಿಯ ಪ್ರಕರಣಗಳಿವೆ.