ETV Bharat / city

ಬೆಳಗಾವಿ: ಮೂವರು ಕಂದಮ್ಮಗಳನ್ನು ಬಲಿ ಪಡೆದ ರೂಬೆಲ್ಲಾ ಚುಚ್ಚುಮದ್ದು - babies died in belagavi

ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೂಬೆಲ್ಲಾ ಚುಚ್ಚುಮದ್ದು ಪಡೆದ ಮೂವರು ಕಂದಮ್ಮಗಳು ಸಾವನ್ನಪ್ಪಿವೆ.

3 babies died after taking injection at belagavi
ಮೂವರು ಕಂದಮ್ಮಗಳನ್ನು ಬಲಿ ಪಡೆದ ಚುಚ್ಚುಮದ್ದು
author img

By

Published : Jan 16, 2022, 1:12 PM IST

ಬೆಳಗಾವಿ: ರೂಬೆಲ್ಲಾ ಚುಚ್ಚುಮದ್ದು ಪಡೆದು ಅಸ್ವಸ್ಥಗೊಂಡಿದ್ದ ಮೂವರು ಕಂದಮ್ಮಗಳು ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದ ಪವಿತ್ರಾ ಹುಲಗೂರ್ (13 ತಿಂಗಳು), ಮಧು ಉಮೇಶ್ ಕುರಗುಂದಿ (14 ತಿಂಗಳು) ಹಾಗೂ ಲರಾಮದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಚೇತನ (15 ತಿಂಗಳು) ಮೃತ ಕಂದಮ್ಮಗಳೆಂದು ತಿಳಿದುಬಂದಿದೆ.

ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಒಟ್ಟು 17 ಮಕ್ಕಳಿಗೆ ರೂಬೆಲ್ಲಾ ಚುಚ್ಚುಮದ್ದು ನೀಡಿದ್ದರು. ಆ ಬಳಿಕ ನಾಲ್ಕು ಮಕ್ಕಳು ಅಸ್ವಸ್ಥರಾಗಿದ್ದು, ಮೃತಪಟ್ಟಿದ್ದಾರೆ. ಇನ್ನೊಂದು ಮಗುವಿನ ಪರಿಸ್ಥಿತಿ ಗಂಭೀರವಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಸಾಲ ವಾಪಸ್ ನೀಡುವಂತೆ ವೃದ್ಧೆಗೆ ಬಂದೂಕು ತೋರಿಸಿ ಬೆದರಿಕೆ

ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.