ETV Bharat / city

ಬಿಜೆಪಿ ಮುಖ್ಯಮಂತ್ರಿ ಸ್ಥಾನ ‘ಪೇಮೆಂಟ್ ಸೀಟಾ’?: ಸಿದ್ದರಾಮಯ್ಯ ಪ್ರಶ್ನೆ - 40% Government

ಗುತ್ತಿಗೆದಾರರಿಂದ 40% ಕಮಿಷನ್ ವಸೂಲಿ, ಪಿಎಸ್​ಐ ಮತ್ತಿತರ ಹುದ್ದೆಗಳ ನೇಮಕದ ಅಕ್ರಮ ವ್ಯವಹಾರ, ಆರೋಗ್ಯ ಇಲಾಖೆಯ ಭ್ರಷ್ಟಾಚಾರವೂ ಸೇರಿದಂತೆ ಎಲ್ಲ ಹಗರಣಗಳಿಗೂ ಯತ್ನಾಳ್ ಮಾಡಿರುವ ಆರೋಪಕ್ಕೂ ನೇರವಾದ ಸಂಬಂಧ ಇದೆ. ಇವೆಲ್ಲವುಗಳ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

opposition leader Siddaramayya talked to Press
ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ
author img

By

Published : May 7, 2022, 1:34 PM IST

Updated : May 7, 2022, 2:33 PM IST

ಬೆಂಗಳೂರು/ಬೆಳಗಾವಿ: ತಮ್ಮನ್ನು ಮುಖ್ಯಮಂತ್ರಿ ಮಾಡಲು 2500 ಕೋಟಿ ರೂಪಾಯಿ ದೆಹಲಿಯವರು ಕೇಳಿದ್ದರು ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಅವರ ಆರೋಪ ಗಂಭೀರ ಸ್ವರೂಪದ್ದಾಗಿದ್ದು ಸೂಕ್ತ ತನಿಖೆಯಿಂದ ಮಾತ್ರ ಇದರ ಹಿಂದಿನ ಸತ್ಯಾಸತ್ಯತೆ ಬಹಿರಂಗವಾಗಲು ಸಾಧ್ಯ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಯತ್ನಾಳ್ ಆರೋಪದ ಬಗ್ಗೆ ತನಿಖೆ ನಡೆಸದೆ ಇದ್ದರೆ ಬಿಜೆಪಿ ನಾಯಕರಿಗೆ ಸಾವಿರಾರು ಕೋಟಿ ರೂಪಾಯಿ ತೆತ್ತು ಮುಖ್ಯಮಂತ್ರಿಯಾಗಿರುವುದನ್ನು ಬಸವರಾಜ ಬೊಮ್ಮಾಯಿ ಅವರೇ ಒಪ್ಪಿಕೊಂಡಂತಾಗುತ್ತದೆ. ಅದರ ನಂತರ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರುವ ಯಾವ ನೈತಿಕತೆ ಇರುವುದಿಲ್ಲ. ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾತನಾಡುತ್ತಿರುವುದನ್ನು ಕೇಳಿದರೆ ಅವರ ಬಳಿ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಅಗಾಧವಾದ ಮಾಹಿತಿ ಇದ್ದಂತೆ ಕಾಣುತ್ತಿದೆ. ಅವರನ್ನು ತನಿಖೆ ನಡೆಸಿ ಆ ಮಾಹಿತಿಯನ್ನು ಪಡೆದರೆ ತನಿಖೆಯೂ ಸಲೀಸಾಗುತ್ತದೆ, ಸತ್ಯವೂ ಹೊರಬರುತ್ತದೆ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ಬಿಜೆಪಿಯಲ್ಲಿ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷ ಆಯ್ಕೆ ಮಾಡುತ್ತದೆ ಎಂದು ಜನ ತಿಳಿದುಕೊಂಡಿದ್ದರು. ಇದು ಹರಾಜಿನ ಮೂಲಕ ಮಾರಾಟವಾಗುವ ‘ಪೇಮೆಂಟ್ ಸೀಟು’ ಎನ್ನುವುದು ಶಾಸಕ ಯತ್ನಾಳ್ ಆರೋಪದಿಂದ ಬಯಲಾಗಿದೆ. ಈ ಸೀಟಿಗಾಗಿ ಹಿಂದಿನ ಮತ್ತು ಈಗಿನ ಮುಖ್ಯಮಂತ್ರಿಗಳು ಎಷ್ಟು ದುಡ್ಡು ಕೊಟ್ಟಿದ್ದಾರೆ ಎನ್ನುವುದೂ ಬಹಿರಂಗವಾಗಬೇಕು. ಈ “ಪೇಮೆಂಟ್ ಸೀಟುಗಳು” ಕೇವಲ ಮುಖ್ಯಮಂತ್ರಿ ಕುರ್ಚಿಗೆ ಸೀಮಿತವಾಗಿಲ್ಲ, ಸಚಿವ ಸ್ಥಾನಗಳನ್ನೂ ಈ ರೀತಿ ಹರಾಜು ಕೂಗಲಾಗಿದೆ ಎನ್ನುವ ಆರೋಪ ಇದೆ. ಬಿಜೆಪಿಗೆ ಪಕ್ಷಾಂತರ ಮಾಡಿದ ಶಾಸಕರು ಯಾರಿಗೆ ಮತ್ತು ಎಷ್ಟು ದುಡ್ಡು ಸಂದಾಯ ಮಾಡಿದ್ದಾರೆ ಎನ್ನುವುದೂ ತನಿಖೆಯಾಗಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಗುತ್ತಿಗೆದಾರರಿಂದ 40% ಕಮಿಷನ್ ವಸೂಲಿ, ಪಿಎಸ್​ಐ ಮತ್ತಿತರ ಹುದ್ದೆಗಳ ನೇಮಕದ ಅಕ್ರಮ ವ್ಯವಹಾರ, ಆರೋಗ್ಯ ಇಲಾಖೆಯ ಭ್ರಷ್ಟಾಚಾರವೂ ಸೇರಿದಂತೆ ಎಲ್ಲ ಹಗರಣಗಳಿಗೂ ಯತ್ನಾಳ್ ಮಾಡಿರುವ ಆರೋಪಕ್ಕೂ ನೇರವಾದ ಸಂಬಂಧ ಇದೆ. ಇವೆಲ್ಲವುಗಳ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಮುಖ್ಯಮಂತ್ರಿ ಮತ್ತು ಸಚಿವರಾಗಲು ಪೇಮೆಂಟ್ ಮಾಡಿದವರು ಅದರ ವಸೂಲಿಗಾಗಿಯೇ ಈಗ ಕಮಿಷನ್ ದಂಧೆ ಮತ್ತು ಅಕ್ರಮ ವ್ಯವಹಾರಕ್ಕೆ ಇಳಿದಿದ್ದಾರೆ.

ಇದರಿಂದ ಒಬ್ಬ ಅಮಾಯಕ ಜೀವ ಕಳೆದುಕೊಂಡ, ಸಾವಿರಾರು ಅಮಾಯಕರು ಭವಿಷ್ಯ ಕಳೆದುಕೊಂಡರು. (ಪಿಎಸ್​ಐ ಹಗರಣ) ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಹೊಸದೇನಲ್ಲ. ಕಳೆದ ಎರಡು ವರ್ಷಗಳಿಂದ ಇವರು ತಮ್ಮದೇ ಪಕ್ಷದ ಮುಖ್ಯಮಂತ್ರಿಗಳು, ಸಚಿವರು ಮತ್ತು ನಾಯಕರ ವಿರುದ್ದ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ಹೈಕಮಾಂಡ್ ಮೌನವಾಗಿರುವುದು ಸಮ್ಮತಿಯ ಸೂಚನೆಯೇ? ಎಂದು ಪ್ರಶ್ನಿಸಿದ್ದಾರೆ.

ಕೋವಿಡ್​ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ: ಕೋವಿಡ್ ಮೃತರ ಸಂಖ್ಯೆಯ ಬಗ್ಗೆ ತಪ್ಪು ಮಾಹಿತಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ರಾಜ್ಯದ ಸಿಎಂ, ಕೇಂದ್ರ ಹಾಗೂ ರಾಜ್ಯ ಆರೋಗ್ಯ ಸಚಿವರು ದೇಶದ ಜನರ ಕ್ಷಮೆಯಾಚಿಸಬೇಕು. ಮೃತರ ಕುಟುಂಬಕ್ಕೆ 4 ಲಕ್ಷ ಪರಿಹಾರ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ವಿಶ್ವಸಂಸ್ಥೆ ನೀಡಿರುವ ಮಾಹಿತಿಯಲ್ಲಿ 2020 ಜನವರಿಯಿಂದ 2021 ಡಿಸೆಂಬರ್​ವರೆಗೆ ಭಾರತದಲ್ಲಿ ಸುಮಾರು 47ಲಕ್ಷ ಜನರು ಕೋವಿಡ್​ಗೆ ಬಲಿಯಾಗಿದ್ದಾರೆ. ಡಬ್ಲ್ಯೂಎಚ್ಒ ಹೇಳಿರುವುದು ಸುಳ್ಳು ಎಂದು ಕೇಂದ್ರ ಸರ್ಕಾರ ವಾದಿಸುತ್ತಿದೆ. ಆದರೆ WHO ಹೇಳುವುದು ಸುಳ್ಳು ಹೇಗೆ ಆಗುತ್ತದೆ. ಈ ವಿಷಯದಲ್ಲಿ ಪ್ರಧಾನಮಂತ್ರಿ ಸುಳ್ಳು ಹೇಳುತ್ತಿದ್ದಾರೆ. ಕೊರೊನಾದಿಂದ ನಿಜವಾಗಿ ಸತ್ತವರ ಬಗ್ಗೆ ಡೆತ್ ಆಡಿಟ್ ಆಗಬೇಕು. ಸತ್ತವರ ಸಂಖ್ಯೆಯನ್ನ ಮುಚ್ಚಿಹಾಕುವ ಕೆಲಸ ಸರ್ಕಾರ ಮಾಡ್ತಿದೆ ಎಂದು ಸಿದ್ದರಾಮ್ಮಯ ಆರೋಪಿಸಿದರು.

ಇದನ್ನೂ ಓದಿ: ನನ್ನ ರಾಜಕೀಯ ಜೀವನದಲ್ಲಿ ಬಿಜೆಪಿಯಂತಹ ಬ್ರಹ್ಮಾಂಡ ಭ್ರಷ್ಟ ಸರ್ಕಾರ ನೋಡಿಲ್ಲ: ಡಿಕೆಶಿ

Last Updated : May 7, 2022, 2:33 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.