ಬೆಳಗಾವಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಐದು ಎಕರೆ ಕಬ್ಬು ಸುಟ್ಟ ಭಸ್ಮವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶಿವಾಪುರ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಶಿವಾಪುರ ಗ್ರಾಮದಲ್ಲಿ ತಡರಾತ್ರಿ ಶಾರ್ಟ್ ಸರ್ಕ್ಯೂಟ್ನಿಂದ ಕಬ್ಬಿನ ಗದ್ದೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳೀಯರ ಸಹಕಾರ ಪಡೆದು ಬೆಂಕಿ ನಂದಿಸಿದ್ದಾರೆ.
ಸ್ಥಳೀಯರ ಸಮಯ ಪ್ರಜ್ಞೆಯಿಂದ ನೂರಾರು ಎಕರೆ ಕಬ್ಬು ಬಚಾವ್ ಆಗಿದ್ದು, ಶಾರ್ಟ್ ಸರ್ಕ್ಯೂಟ್ ಸಂಭವಿಸಲು ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ರೈತರು ಆರೋಪಿಸುತ್ತಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಓದಿ: ಸತ್ಯಕ್ಕೆ ಸಮಾಧಿ ಕಟ್ಟಿ 'ಸುಳ್ಳಿನಯಾತ್ರೆ'ಗೆ ಹೊರಟವರ ಜಾತಕ ದಾಖಲೆಗಳೇ ಬೆತ್ತಲು ಮಾಡುತ್ತಿವೆ: HDK ವಾಗ್ದಾಳಿ