ಬೆಳಗಾವಿ: ಗದ್ದೆಯಲ್ಲಿ ತುಂಡಾಗಿ ಬಿದಿದ್ದ ವಿದ್ಯುತ್ ತಂತಿ ತುಳಿದು ಎಂಟು ವರ್ಷದ ಬಾಲಕಿ ಮೃತಪಟ್ಟ ಮನಕಲುಕುವ ಘಟನೆ ಗೋಕಾಕ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೂನವ್ವ ಸರ್ವಿ(8) ಮೃತ ಬಾಲಕಿ.
ಪೋಷಕರ ಜೊತೆ ತೋಟದ ಮನೆಯಲ್ಲಿ ವಾಸವಾಗಿದ್ದ ಬಾಲಕಿ, ತಮ್ಮ ಪಕ್ಕದ ಹೊಲದಲ್ಲಿರುವವ ಮನೆಗೆ ಓದಲು ಹೋಗಿದ್ದಳು. ಓದು ಮುಗಿಸಿ ಸಂಜೆ ಹಿಂತಿರುಗುವಾಗ ತುಂಡರಿಸಿ ಬಿದ್ದಿರುವ ತಂತಿಯ ಮೇಲೆ ಕಾಲಿಟ್ಟ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ವಿದ್ಯುತ್ ತಂತಿ ತುಂಡರಿಸಿ ಬಿದ್ದು, ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಘಟನೆಗೆ ಕಾರಣರಾದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗೋಕಾಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಇದನ್ನೂ ಓದಿ: ಇಂಜೆಕ್ಷನ್ ತೆಗೆದುಕೊಂಡ ಬಳಿಕ ಅಸ್ವಸ್ಥಗೊಂಡಿದ್ದ ಮಕ್ಕಳ ಆರೋಗ್ಯದಲ್ಲಿ ಚೇತರಿಕೆ)