ETV Bharat / city

ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಭೀಕರ ಅಪಘಾತ: SDRF ನಿಂದ ಕ್ಯಾಂಟರ್​ ಚಾಲಕನ ರಕ್ಷಣೆ

ಸುವರ್ಣ ವಿಧಾನಸೌಧದ ಹಲಗಾ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕ್ಯಾಂಟರ್ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ವಾಹನದಲ್ಲಿ ಸಿಲುಕಿದ್ದ ವ್ಯಕ್ತಿಯನ್ನ ಎಸ್​ಡಿಆರ್​ಎಫ್ ತಂಡದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

author img

By

Published : May 14, 2022, 11:50 AM IST

Updated : May 14, 2022, 12:11 PM IST

SDRF ನಿಂದ ಕ್ಯಾಂಟರ್​ನಲ್ಲಿ ಚಾಲಕನ ರಕ್ಷಣೆ
SDRF ನಿಂದ ಕ್ಯಾಂಟರ್​ನಲ್ಲಿ ಚಾಲಕನ ರಕ್ಷಣೆ

ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಎರಡು ವಾಹನಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ಯಾಂಟರ್​ನಲ್ಲಿ ಸಿಲುಕಿದ್ದ ಚಾಲಕನನ್ನು ಎಸ್​ಡಿಆರ್​ಎಫ್ ತಂಡದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.

ಸುವರ್ಣ ವಿಧಾನಸೌಧದ ಹಲಗಾ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕ್ಯಾಂಟರ್ ವಾಹನಗಳ ನಡುವೆ ಅಪಘಾತ ಸಂಭವಿಸಿತ್ತು. ಈ ವೇಳೆ ಕ್ಯಾಂಟರ್ ವಾಹನದಲ್ಲಿ ಸಿಲುಕಿದ್ದ ವ್ಯಕ್ತಿಯನ್ನ ಎಸ್​ಡಿಆರ್​ಎಫ್ ತಂಡದ ಸಿಬ್ಬಂದಿ ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಜೀವಂತವಾಗಿ ರಕ್ಷಿಸಿದ್ದಾರೆ.

SDRF ನಿಂದ ಕ್ಯಾಂಟರ್​ನಲ್ಲಿ ಚಾಲಕನ ರಕ್ಷಣೆ

ಹಾವೇರಿ ಮೂಲದ ಚಾಲಕ ಭೀಮಪ್ಪ ಶೇಖಪ್ಪ ಕನ್ನಪ್ಪನವರ ಬದುಕುಳಿದ ವ್ಯಕ್ತಿ. ಈತ ತಡರಾತ್ರಿ ಹಿರೇಬಾಗೆವಾಡಿ ಕಡೆಯಿಂದ ಬೆಳಗಾವಿ ಮಾರ್ಗವಾಗಿ ಬರುವಾಗ ನಿಯಂತ್ರಣ ತಪ್ಪಿ‌ ಮುಂದೆ ಹೋಗುತ್ತಿದ್ದ ಕ್ಯಾಂಟರ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಕ್ಯಾಂಟರ್ ವಾಹನದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಡಿ ಚಾಲಕ ಸಿಲುಕಿದ್ದನು.

ಪ್ರಾಣಾಪಾಯದಲ್ಲಿದ್ದ ಕ್ಯಾಂಟರ್ ವಾಹನ ಚಾಲಕನನ್ನ ನೋಡಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇತ್ತ ಪೊಲೀಸರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಎಸ್​ಡಿಆರ್​ಎಫ್ ತಂಡದ ಸಿಬ್ಬಂದಿ ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಚಾಲಕನನ್ನು ರಕ್ಷಣೆ ಮಾಡಿದ್ದಾರೆ. ಹಿರೇಬಾಗೆವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

Last Updated : May 14, 2022, 12:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.