ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಕಾಗವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಉಗಾರ ಬುದ್ರುಕ ಗ್ರಾಮದಲ್ಲಿ 31ನೇಯ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಹಿನ್ನೆಲೆಯಲ್ಲಿ ಜಾಗೃತಿ ಮೂಡಿಸಲಾಯ್ತು.
ನಿಯಮಗಳನ್ನು ಪಾಲಿಸಿದರೆ ಅಪಾಯಗಳು ಕಡಿಮೆಯಾಗುತ್ತವೆ. ಪೊಲೀಸ್ ಇಲಾಖೆಗೆ ಜನರ ಜೀವ ಮಹತ್ವವೇ ಹೊರತು ಬೈಕ್ ಅಲ್ಲ. ನಿಮಗಾಗಿ ಅಲ್ಲದಿದ್ದರೂ ನಿಮ್ಮ ತಂದೆ-ತಾಯಿ, ಹೆಂಡತಿ ಮಕ್ಕಳಿಗಾದರೂ ನಾಗರಿಕರೆಲ್ಲರೂ ರಸ್ತೆ ನಿಯಮಗಳನ್ನು ಪಾಲಿಸಿ, ಪೊಲೀಸ್ ಠಾಣೆಯಲ್ಲಿ ಅತಿ ಹೆಚ್ಚು ಅಪಘಾತ ಪ್ರಕರಣಗಳೇ ದಾಖಲಾಗ್ತವೆ. ಅದರಲ್ಲಿ ಹೆಲ್ಮೇಟ್ ಇಲ್ಲದ ಸವಾರರ ಸಾವಿನ ಸಂಖ್ಯೆಗಳು ಹೆಚ್ಚಾಗಿವೆ. ಅದಕ್ಕಾಗಿ ಹೆಲ್ಮೆಟ್‌ನ ಕಡ್ಡಾಯವಾಗಿ ಬಳಕೆ ಮಾಡಿ ಎಂದು ಹೇಳಿದರು.