ಬೆಳಗಾವಿ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ತಲ್ವಾರ್ನಿಂದ ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಗೋಕಾಕ ನಗರದಲ್ಲಿ ನಡೆದಿದೆ.
ಗೋಕಾಕ ನಿವಾಸಿ ಸಿದ್ದು ಕನಮಡ್ಡಿ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಗಂಭೀರ ಗಾಯಗೊಂಡಿರುವ ಸಿದ್ದು ಕನಮಡ್ಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ.
ಸುನೀಲ್ ಮುರಕಿಭಾವಿ, ಕೇದಾರಿ ಜಾಧವ, ಸಂತೋಷ ಚಿಗಡೊಳ್ಳಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆಂದು ಹಲ್ಲೆಗೊಳಗಾದ ವ್ಯಕ್ತಿ ಆರೋಪ ಮಾಡಿದ್ದಾನೆ. ಗೋಕಾಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.