ಬೆಳಗಾವಿ: ಇನ್ನೂರಕ್ಕೂ ಅಧಿಕ ಜನರ ಮತಾಂತರಕ್ಕೆ ಯತ್ನಿಸುತ್ತಿದ್ದ ಘಟನೆ ಇಲ್ಲಿನ ಮರಾಠಾ ಕಾಲೊನಿಯಲ್ಲಿ ನಡೆದಿದೆ. ಈ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಹಿಂದೂಪರ ಸಂಘಟನೆ ಕಾರ್ಯಕರ್ತರು ಮತಾಂತರವನ್ನು ತಡೆದಿದ್ದಾರೆ.
ಮತಾಂತರ ಮಾಡುತ್ತಿದ್ದ ಕಟ್ಟಡಕ್ಕೆ ಹಿಂದೂಪರ ಕಾರ್ಯಕರ್ತರ ಮುತ್ತಿಗೆ ಹಾಕಿದರು. ಬೆಳಗಾವಿ ಜಿಲ್ಲೆಯ ಗ್ರಾಮೀಣ ಭಾಗದಿಂದ ಇನ್ನೂರಕ್ಕೂ ಅಧಿಕ ಜನರು ಆಗಮಿಸಿದ್ದರು. ಪ್ರತಿ ಭಾನುವಾರ ಮತಾಂತರ ಮಾಡುತ್ತಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹಿಂದೂ ಪರ ಕಾರ್ಯಕರ್ತರು ಸ್ಥಳಕ್ಕೆ ದೌಡಾಯಿಸಿದ್ದರು. ಈ ವೇಳೆ ಪಾದ್ರಿ ಎಂದು ಹೇಳಲಾಗುವ ವ್ಯಕ್ತಿಯನ್ನು ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡರು.
ಹಿಂದೂ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಕೆಲವರು ಪ್ರಾರ್ಥನೆ ಮೊಟಕುಗೊಳಿಸಿ ಅಲ್ಲಿಂದ ಪರಾರಿಯಾಗಿದ್ದಾರೆ. ಕಟ್ಟಡದಲ್ಲಿ ಜಮಾವಣೆಗೊಂಡವರನ್ನು ಕೂಡಿಹಾಕಲಾಗಿದೆ. ಸ್ಥಳದಲ್ಲಿ ಇಪ್ಪತ್ತಕ್ಕೂ ಅಧಿಕ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಟೀಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.