ಬೆಳಗಾವಿ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಗಡಿನಾಡಿನಲ್ಲಿ ಕಟ್ಟೆಚ್ಚರ ವಹಿಸುವ ದೃಷ್ಟಿಯಿಂದ ಜಿಲ್ಲಾ ಪ್ರವಾಸ ಕೈಗೊಂಡಿರುವ ಆರೋಗ್ಯ ಸಚಿವ ಬಿ.ಶ್ರೀರಾಮುಲು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೊರೊನಾ ವೈರಸ್ ಹರಡದಂತೆ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಂತರ ಆಸ್ಪತ್ರೆಗೆ ಭೇಟಿ ನೀಡಿ ಸೋಂಕು ತಡೆಗೆ ಅಲ್ಲಿನ ವೈದ್ಯರು ತೆಗೆದುಕೊಂಡಿರುವ ಕ್ರಮಗಳ ಕುರಿತು ಸಮಾಲೋಚನೆ ನಡೆಸಿದರು.