ಬೆಳಗಾವಿ: ಜಿಲ್ಲೆಯ ರಾಮದುರ್ಗದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದ ಆವರಣದಲ್ಲಿ ಹಿಂದೂಯೇತರ ಅಂಗಡಿಗಳಿಗೆ ಅವಕಾಶ ನೀಡದಂತೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮದ ಪ್ರಕಾರ ದತ್ತಿ ಇಲಾಖೆಗೆ ಒಳಪಡುವ ಶ್ರೀ ವೆಂಕಟೇಶ್ವರ ದೇವಸ್ಥಾನದ ಮಹೋತ್ಸವದಲ್ಲಿ ಹಿಂದೂಯೇತರ ಅಂಗಡಿಗಳಿಗೆ ಅವಕಾಶ ನೀಡದಂತೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ರಾಮದುರ್ಗದ ತಹಶೀಲ್ದಾರ್ಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಏ.11 ರಿಂದ 15ರವರೆಗೆ ಐತಿಹಾಸ ಪ್ರಸಿದ್ಧ ಶ್ರೀ ವೆಂಕಟೇಶ್ವರ ಜಾತ್ರಾಮಹೋತ್ಸವ ಜರುಗಲಿದೆ. ಜಾತ್ರೆಯಲ್ಲಿ ಹಿಂದೂಯೇತರಿಗೆ ಅಂಗಡಿಗಳನ್ನು ತೆರೆಯಲು ಅವಕಾಶ ಕೊಡಬಾರದು. ದೇವಸ್ಥಾನಗಳ ಆವರಣದಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ವ್ಯಾಪಾರ - ವಹಿವಾಟುಗಳನ್ನು ನಡೆಸಲು ಅವಕಾಶ ನೀಡಬೇಕೆಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಹಿಂದೂಯೇತರರಿಗೆ ದೇವಾಲಯಗಳ ಜಾತ್ರೋತ್ಸವಗಳಲ್ಲಿ ವ್ಯಾಪಾರ ನಿರಾಕರಿಸಿ ಬ್ಯಾನರ್ ಅಳವಡಿಕೆ