ETV Bharat / city

ಬೆಳಗಾವಿ ಡಿಸಿಸಿ ಬ್ಯಾಂಕ್ ಸಿಬ್ಬಂದಿಯಿಂದ ದಿಢೀರ್ ಪ್ರತಿಭಟನೆ!

author img

By

Published : Feb 27, 2022, 12:14 PM IST

ಬ್ಯಾಂಕ್ ಗೇಟ್‌ನಲ್ಲೇ ರಮೇಶ್ ಕತ್ತಿ ಅವರನ್ನು ತಡೆದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಸಿಬ್ಬಂದಿ ದಿಢೀರ್ ಪ್ರತಿಭಟನೆ ಬೆನ್ನಲ್ಲೇ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ನೇತೃತ್ವದಲ್ಲಿ ಆಡಳಿತ ಮಂಡಳಿ ಸಭೆ ನಡೆಸಲಾಯಿತು..

belagavi dcc bank employees protest urging that fulfill their demands
ಬೆಳಗಾವಿ ಡಿಸಿಸಿ ಬ್ಯಾಂಕ್ ಸಿಬ್ಬಂದಿಯಿಂದ ದಿಢೀರ್ ಪ್ರತಿಭಟನೆ

ಬೆಳಗಾವಿ : ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಡಿಸಿಸಿ ಬ್ಯಾಂಕ್ ಸಿಬ್ಬಂದಿ ದಿಢೀರ್ ಪ್ರತಿಭಟನೆ ನಡೆಸಿದರು. ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿಗೆ ಮುತ್ತಿಗೆ ಹಾಕಿ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ ಡಿಸಿಸಿ ಬ್ಯಾಂಕ್ ಸಿಬ್ಬಂದಿಯಿಂದ ದಿಢೀರ್ ಪ್ರತಿಭಟನೆ..

ಬೆಳಗಾವಿ ಡಿಸಿಸಿ ಬ್ಯಾಂಕ್‌ಗೆ ನಬಾರ್ಡ್ ಅಧಿಕಾರಿಗಳು ಭೇಟಿ ನೀಡಿದ್ದರು. ಈ ವೇಳೆ ಬ್ಯಾಂಕ್‌ಗೆ ಆಗಮಿಸಿದ ರಮೇಶ್ ಕತ್ತಿ ಅವರನ್ನು ಬ್ಯಾಂಕ್ ಸಿಬ್ಬಂದಿ ಮುತ್ತಿಗೆ ಹಾಕಿದರು.

ಬ್ಯಾಂಕ್ ಗೇಟ್‌ನಲ್ಲೇ ರಮೇಶ್ ಕತ್ತಿ ಅವರನ್ನು ತಡೆದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಸಿಬ್ಬಂದಿ ದಿಢೀರ್ ಪ್ರತಿಭಟನೆ ಬೆನ್ನಲ್ಲೇ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ನೇತೃತ್ವದಲ್ಲಿ ಆಡಳಿತ ಮಂಡಳಿ ಸಭೆ ನಡೆಸಲಾಯಿತು.

ಇದನ್ನೂ ಓದಿ: ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಚಾಲನೆ

ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ, ಸಂಸದ ಅಣ್ಣಾಸಾಹೇಬ್ ಜೊಲ್ಲೆ ಸೇರಿ ಇತರೆ ನಿರ್ದೇಶಕರು ಭಾಗಿಯಾಗಿದ್ದರು.

ಸಿಬ್ಬಂದಿ ಬೇಡಿಕೆ ಈಡೇರಿಕೆ ಸಂಬಂಧ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ಐವರ ಸಮಿತಿ ರಚನೆ ಮಾಡಲಾಯಿತು. ಏಪ್ರಿಲ್ 16ರೊಳಗೆ ಸಿಬ್ಬಂದಿ ಸಮಸ್ಯೆ ಇತ್ಯರ್ಥ ಪಡಿಸುವುದಾಗಿ ಲಕ್ಷಣ್ ಸವದಿ ಇದೇ ವೇಳೆ ಪ್ರತಿಭಟನೆ ನಡೆಸಿದ ಸಿಬ್ಬಂದಿಗೆ ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಹಿಂಪಡೆದು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.