ಬೆಳಗಾವಿ: ನಮ್ಮ ದೇಶದಲ್ಲಿ ಹೆಣ್ಣಿನ ಪ್ರಮಾಣ ಕಡಿಮೆಯಾಗುತ್ತಿದೆ. ಪ್ರತಿಯೊಬ್ಬರು ಗಂಡು ಮಕ್ಕಳ ಆಸೆ ಬಿಟ್ಟು ಹೆಣ್ಣುಮಕ್ಕಳ ರಕ್ಷಣೆ ಮಾಡಬೇಕಿದೆ ಎಂದು ಪಿ.ಸಿ.ಪಿ.ಎನ್.ಡಿ.ಟಿ ಸಮಿತಿಯ ನಿರ್ದೇಶಕ ಡಾ. ಸಂಜಯ ಹೊಸಮಠ ತಿಳಿಸಿದರು.
ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಕುರಿತು ಗುರುವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಣ್ಣು ಭ್ರೂಣ ಹತ್ಯೆ, ಹೆಣ್ಣು ಭ್ರೂಣ ಪತ್ತೆ ಮಾಡುವದು ನಿಷೇಧ ಇದೆ ಎಂದು ಜಿಲ್ಲೆಯ ಎಲ್ಲಾ ವೈದ್ಯರಿಗೆ ಡಾ. ಸಂಜಯ ಹೊಸಮಠ ಅವರು ಹೇಳಿದರು.
ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ಮತ್ತು ಹೆಣ್ಣು ಭ್ರೂಣ ಪತ್ತೆ ಮಾಡುವುದು ಕಡಿಮೆ ಆಗಿದೆ. ಪಿ.ಸಿ.ಪಿ.ಎನ್.ಡಿ.ಟಿ ಸಮಿತಿ ಅಡಿ ಮುಂದಿನ ದಿನಗಳಲ್ಲಿ ಅರಿವು ಮೂಡಿಸಲು ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಅಲ್ಲದೆ ಹೆಣ್ಣಿನ ಮೇಲೆ ಆಗುತ್ತಿರುವ ಅತ್ಯಾಚಾರಗಳು ಕಡಿಮೆ ಮಾಡಲು ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಕೂಡಿ ಕೆಲಸ ಮಾಡಬೇಕಾಗಿದೆ ಎಂದರು.