ETV Bharat / city

ಬೆಳಗಾವಿ: ಬಸ್ ನಿಲ್ದಾಣ ನಿಯಂತ್ರಣಾಧಿಕಾರಿ ಮೇಲೆ ಪ್ರಯಾಣಿಕನಿಂದ ಹಲ್ಲೆ - A passenger had assaulted a traffic controller

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಬಸ್ ವಿಚಾರಣೆ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿ ಮತ್ತು ಪ್ರಯಾಣಿಕನ ನಡುವೆ ಮಾತಿನ ಚಕಮಕಿ‌ ನಡೆದಿದೆ. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ ಅಧಿಕಾರಿ ಮತ್ತು ಪ್ರಯಾಣಿಕ ಒಬ್ಬರ ಮೇಲೊಬ್ಬರು ಹಲ್ಲೆ ಮಾಡಿದ್ದಾರೆ.

ಬಸ್ ನಿಲ್ದಾಣದ ನಿಯಂತ್ರಣಾಧಿಕಾರಿ ಮತ್ತು ಪ್ರಯಾಣಿಕನ ನಡುವೆ ನಡೆದ ಮಾತಿನ ಚಕಮಕಿ‌

author img

By

Published : Jul 4, 2022, 10:15 AM IST

ಬೆಳಗಾವಿ: ಬಸ್ ನಿಲ್ದಾಣದ ನಿಯಂತ್ರಣಾಧಿಕಾರಿ ಕೊಠಡಿಗೆ ನುಗ್ಗಿದ ಪ್ರಯಾಣಿಕನೊಬ್ಬ ಬಸ್ ಸಂಚಾರ ನಿಯಂತ್ರಣಾಧಿಕಾರಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ನಡೆದಿದೆ.

ಬಸ್ ವಿಚಾರಣೆ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿ ಮತ್ತು ಪ್ರಯಾಣಿಕನ ನಡುವೆ ಮಾತಿನ ಚಕಮಕಿ‌ ನಡೆದಿದೆ. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ ಅಧಿಕಾರಿ ಮತ್ತು ಪ್ರಯಾಣಿಕ ಒಬ್ಬರ ಮೇಲೊಬ್ಬರು ಹಲ್ಲೆ ಮಾಡಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಸಾರಿಗೆ ಇಲಾಖೆ ಸಿಬ್ಬಂದಿ ಪ್ರಯಾಣಿಕನಿಗೆ ಥಳಿಸಿ ಕೊಠಡಿಯಲ್ಲಿ ಕೂಡಿ ಹಾಕಿ ರಾಮದುರ್ಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಕಲಬುರಗಿ: ತೈಲ ಟ್ಯಾಂಕರ್-ಕಾರು ಡಿಕ್ಕಿ, ಇಬ್ಬರು ದುರ್ಮರಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.