ಬೆಳಗಾವಿ: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ತಾಯಿ, ಇಬ್ಬರು ಮಕ್ಕಳ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್ ಭಟ್ ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಬೆಳಗಾವಿ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೀಡಿದ್ದ ಆದೇಶ ತಿರಸ್ಕರಿಸಿರುವ ಹೈಕೋರ್ಟ್, ಪ್ರಕರಣದ ಆರೋಪಿ ಪ್ರವೀಣ್ ಭಟ್ ನಿರ್ದೋಷಿ ಎಂದು ತೀರ್ಪು ನೀಡಿದೆ.
ನ್ಯಾಯಾಧೀಶರಾದ ಕೆ.ಎಸ್. ಮುದಗಲ್, ಎಂಜಿಎಸ್ ಕಮಲ್ ಅವರು ಜೂನ್ 21 ರಂದು ಈ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 16 ಏಪ್ರಿಲ್ 2018ರಂದು ಪ್ರವೀಣ್ ಭಟ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಆ ಬಳಿಕ ತೀರ್ಪು ಪ್ರಶ್ನಿಸಿ ಆರೋಪಿ ಹೈಕೊರ್ಟ್ ಮೆಟ್ಟಿಲೇರಿದ್ದರು.
ಏನಿದು ಘಟನೆ?: ಬೆಳಗಾವಿಯ ಕುವೆಂಪು ನಗರದಲ್ಲಿ 2015 ಆಗಸ್ಟ್ 16 ರಂದು ನಸುಕಿನ ಜಾವ ತ್ರಿವಳಿ ಕೊಲೆ ನಡೆದಿತ್ತು. ಘಟನೆಯಲ್ಲಿ ರೀನಾ ಮಾಲಗತ್ತಿ, ಆದಿತ್ಯ ಮಾಲಗತ್ತಿ, ಸಾಹಿತ್ಯ ಮಾಲಗತ್ತಿಯನ್ನು ಕೊಲೆಗೈಯ್ಯಲಾಗಿತ್ತು. 24 ಗಂಟೆಯಲ್ಲೇ ಎಪಿಎಂಸಿ ಪೊಲೀಸರು ಪ್ರವೀಣ್ ಭಟ್ನನ್ನು ಬಂಧಿಸಿದ್ದರು. ತ್ರಿವಳಿ ಕೊಲೆಗೆ ರೀನಾ ಹಾಗೂ ಪ್ರವೀಣ್ ಭಟ್ ನಡುವಿನ ಅನೈತಿಕ ಸಂಬಂಧವೇ ಕಾರಣ ಎನ್ನಲಾಗಿತ್ತು.
(ಇದನ್ನೂ ಓದಿ: ಮಹಿಳೆ ಮೇಲೆ ಅತ್ಯಾಚಾರ ಯತ್ನ.. ಪ್ರತಿರೋಧಿಸಿದ್ದಕ್ಕೆ ಬೆಂಕಿ ಇಟ್ಟ ದುಷ್ಕರ್ಮಿಗಳು!)