ETV Bharat / city

ಬೆಳಗಾವಿ ಪ್ರವಾಸ ಅಂತ್ಯ: ಬೆಂಗಳೂರಿಗೆ ಸಿಎಂ ಬಿಎಸ್​ವೈ, ಅರುಣ್ ಸಿಂಗ್ ಪ್ರಯಾಣ - ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ

ಎರಡು ದಿನಗಳ ಕಾಲ ಬೆಳಗಾವಿ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಮುಗಿದ ಹಿನ್ನೆಲೆ ಇಂದು ಬೆಂಗಳೂರಿಗೆ ತೆರಳಿದರು.

Belagavi two days tour end Arun Singh and Yadiyurappa went bangalore
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
author img

By

Published : Dec 5, 2020, 8:06 PM IST

ಬೆಳಗಾವಿ: ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಬೆಳಗಾವಿ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ತೆರಳಿದರು.

ಬೆಂಗಳೂರಿಗೆ ತೆರಳಿದ ಸಿಎಂ

ನಗರದ ಖಾಸಗಿ ಹೋಟೆಲ್​​ನಿಂದ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದ ಎಲ್ಲಾ ನಾಯಕರು ವಿಮಾನದ ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು. ನಾಳೆ ಬೆಳಗ್ಗೆ ಬೆಂಗಳೂರಿನ ಸಿಎಂ ಗೃಹ ಕಚೇರಿಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಚಹಾ ಕೂಟ ಏರ್ಪಡಿಸಲಾಗಿದೆ.

ಇದನ್ನೂ ಓದಿ: ಸಂಪುಟ ವಿಸ್ತರಣೆ ಸಿಎಂ ಯಡಿಯೂರಪ್ಪ ಅವರದ್ದೇ ಪರಮಾಧಿಕಾರ: ಬಿಜೆಪಿ ರಾಜ್ಯ ಉಸ್ತುವಾರಿ

ಈ ವೇಳೆ ಸಂಪುಟ ವಿಸ್ತರಣೆ ಸಂಬಂಧ ಉಭಯ ನಾಯಕರು ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಬಿಜೆಪಿ ಮೂಲಗಳ ಪ್ರಕಾರ ಸಂಕ್ರಾತಿ ಬಳಿಕವೇ ಸಂಪುಟ ವಿಸ್ತರಣೆ ಆಗಲಿದೆ ಎನ್ನಲಾಗುತ್ತಿದೆ.

ಕೋರ್ ಕಮಿಟಿ ಹಾಗೂ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ವಿವಿಧ ಭಾಗಗಳಿಂದ ಆಗಮಿಸಿದ್ದ ಕೇಂದ್ರ ಸಚಿವರು, ರಾಜ್ಯದ ಸಚಿವರು, ಸಂಸದರು ಹಾಗೂ ಶಾಸಕರು ರಸ್ತೆ ಪ್ರಯಾಣ, ರೈಲಿನ ಮೂಲಕ ತಮ್ಮ ಕ್ಷೇತ್ರಗಳಿಗೆ ತೆರಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.