ETV Bharat / city

ಕೋವಿಡ್ ಲಸಿಕೆ ವಿತರಣೆ ಪ್ರಮಾಣ ಹೆಚ್ಚಿಸಿ : ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ಸೂಚನೆ

author img

By

Published : Mar 23, 2021, 5:49 PM IST

ಬಸ್ ಮೂಲಕ ಆಗಮಿಸುವ ಪ್ರಯಾಣಿಕರ ವರದಿಯನ್ನು ಬಸ್ ನಿರ್ವಾಹಕರು ಪರಿಶೀಲಿಸುವುದರಿಂದ ಪರೀಕ್ಷಾ ವರದಿ ಇಲ್ಲದವರನ್ನು ತಡೆಯಬಹುದು. ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು..

Belgaum District Collector Dr. Harish Kumar meeting
ತಹಶೀಲ್ದಾರರೊಂದಿಗೆ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ವಿಡಿಯೋ ಸಂವಾದಕುಮಾರ್

ಬೆಳಗಾವಿ : ಕೋವಿಡ್ ಲಸಿಕೆಯಿಂದ ಯಾವುದೇ ಅಡ್ಡಪರಿಣಾಮವಿಲ್ಲ ಎಂಬುದು ಖಚಿತವಾಗಿರುವುದರಿಂದ ಲಸಿಕೆ ಪಡೆಯಲು ಜನರು ಮುಂದೆ ಬರುತ್ತಿದ್ದಾರೆ. ಆದ್ದರಿಂದ ಈ ಸಂದರ್ಭ ಬಳಸಿ ಜಿಲ್ಲೆಯಲ್ಲಿ ಎಲ್ಲರಿಗೂ ಲಸಿಕೆ ನೀಡಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ ಹರೀಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್ ನಿಯಂತ್ರಣ ಮತ್ತು ಲಸಿಕಾಕರಣ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ತಹಶೀಲ್ದಾರ್‌ರ ಜತೆಗಿನ ವಿಡಿಯೋ ಸಂವಾದದಲ್ಲಿ ಮಾತನಾಡಿದರು. ಕೋವಿಡ್​ ಲಸಿಕೆ ಹಾಕಿಸಿಕೊಳ್ಳಲು ಅನುಕೂಲವಾಗುವಂತೆ ಗ್ರಾಮೀಣ ಪ್ರದೇಶಗಳ ಜನರಿಗೆ ಸಾರಿಗೆ ವ್ಯವಸ್ಥೆ, ಮತ್ತಿತರ ಮೂಲಸೌಕರ್ಯ ಒದಗಿಸುವ ಮೂಲಕ ಲಸಿಕಾಕರಣ ಪ್ರಮಾಣ ಹೆಚ್ಚಿಸಲು ಎಲ್ಲ ರೀತಿಯ ಕ್ರಮಕೈಗೊಳ್ಳಬೇಕು. ಸೋಂಕಿತರ ಸಂಪರ್ಕಿತರನ್ನು ಗುರುತಿಸಬೇಕು, ಪರೀಕ್ಷಿಸಬೇಕು, ಚಿಕಿತ್ಸೆ ಒದಗಿಸಬೇಕು. ಇದರ ಜೊತೆಗೆ ಉಳಿದವರಿಗೆ ಲಸಿಕೆ ನೀಡಲು ಪ್ರಯತ್ನಿಸಬೇಕು ಎಂದು ತಿಳಿಸಿದರು.

ಕೋವಿಡ್ ವರದಿ ಪರಿಶೀಲಿಸಲು ಸೂಚನೆ : ನೆರೆಯ ಮಹಾರಾಷ್ಟ್ರದಿಂದ ಜಿಲ್ಲೆಯ ಮೂಲಕ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು ಮಾರ್ಗಸೂಚಿ ಪ್ರಕಾರ ಕಡ್ಡಾಯವಾಗಿ ಆರ್​ಟಿಪಿಸಿಆರ್​ ಪರೀಕ್ಷಾ ವರದಿ ಹೊಂದಿರಬೇಕು.

ಬಸ್ ಮೂಲಕ ಆಗಮಿಸುವ ಪ್ರಯಾಣಿಕರ ವರದಿಯನ್ನು ಬಸ್ ನಿರ್ವಾಹಕರು ಪರಿಶೀಲಿಸುವುದರಿಂದ ಪರೀಕ್ಷಾ ವರದಿ ಇಲ್ಲದವರನ್ನು ತಡೆಯಬಹುದು. ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

ಓದಿ: ಬೈಕ್​ ಸವಾರ ಸಾವು ಪ್ರಕರಣ : ಪೊಲೀಸರ ಮೇಲೆ ಹಲ್ಲೆ ಮಾಡಿದ 8 ಜನರ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.