ETV Bharat / city

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯತ್ನ: ಪ್ರವಾಹ ಪೀಡಿತ ತಾಲೂಕುಗಳ ಪಟ್ಟಿಗೆ ಬೆಳಗಾವಿ ಸೇರ್ಪಡೆ

author img

By

Published : Aug 17, 2021, 10:36 PM IST

22 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳ ಪಟ್ಟಿಗೆ ರಾಜ್ಯ ಸರ್ಕಾರ ಹೊಸದಾಗಿ ಸೇರ್ಪಡೆ ಮಾಡಿದೆ. ಇದರಲ್ಲಿ ಬೆಳಗಾವಿ ತಾಲೂಕು ಸಹ ಸೇರಿದೆ.

MLA Lakshmi Hebbalkar
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿಶೇಷ ಪ್ರಯತ್ನದಿಂದಾಗಿ ಬೆಳಗಾವಿ ತಾಲೂಕು ಪ್ರವಾಹ ಪೀಡಿತ ತಾಲೂಕುಗಳ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾಗಿದೆ. ಹೊಸದಾಗಿ ಮತ್ತೆ 22 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳ ಪಟ್ಟಿಗೆ ರಾಜ್ಯ ಸರ್ಕಾರ ಸೇರ್ಪಡೆ ಮಾಡಿದೆ. ಇದರಲ್ಲಿ ಬೆಳಗಾವಿಯೂ ಸೇರಿದೆ.

ಈ ಮೊದಲು 61 ತಾಲೂಕುಗಳನ್ನು ನೆರೆ ಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಬೆಳಗಾವಿ ತಾಲೂಕನ್ನು ಸೇರ್ಪಡೆ ಮಾಡದಿರುವುದಕ್ಕೆ ತೀವ್ರ ಆಕ್ರೋಶಗೊಂಡ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಕೂಡಲೇ ಸೇರ್ಪಡೆಗೆ ವ್ಯವಸ್ಥೆ ಮಾಡದಿದ್ದರೆ ನಿಮ್ಮ ಕಚೇರಿ ಎದುರು ಧರಣಿ ಕುಳಿತುಕೊಳ್ಳುವುದಾಗಿ ಜಿಲ್ಲಾಧಿಕಾರಿಗೆ ಎಚ್ಚರಿಕೆ ನೀಡಿದ್ದರು.

ಜೊತೆಗೆ ಬೆಂಗಳೂರಿಗೆ ತೆರಳಿ ಸಂಬಂಧಿಸಿದ ಹಿರಿಯ ಅಧಿಕಾರಿಗಳಿಗೂ ಮಾಹಿತಿ ನೀಡಿ ಪ್ರವಾಹ ಪೀಡಿತ ತಾಲೂಕು ಪಟ್ಟಿಗೆ ಬೆಳಗಾವಿ ಸೇರಿಸಲು ಕೋರಿದ್ದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬೆಳಗಾವಿ ತಾಲೂಕಿನ ಪ್ರವಾಹ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ. ಇಲ್ಲಿನ ಪರಿಸ್ಥಿತಿ ನೋಡಿ ಹೋಗಿದ್ದಾರೆ. ಹಾಗಾಗಿ ಕೂಡಲೇ ಬೆಳಗಾವಿ ತಾಲೂಕನ್ನು ಪ್ರವಾಹ ಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಲೇಬೇಕು ಎಂದು ಲಕ್ಷ್ಮಿ ಹೆಬ್ಬಾಳ್ಕರ್​​ ಪಟ್ಟು ಹಿಡಿದಿದ್ದರು.

ಇದನ್ನೂ ಓದಿ: ಬಿಜೆಪಿ ಶಾಸಕನ ಧರಣಿಗೆ ಮಣಿದ ಸರ್ಕಾರ: ನೆರೆಪೀಡಿತ ತಾಲೂಕು ಪಟ್ಟಿಗೆ ಮೂಡಿಗೆರೆ ಸೇರ್ಪಡೆ

ಇದರಿಂದಾಗಿ ಜಿಲ್ಲಾಧಿಕಾರಿಗಳು ಎಲ್ಲ ಮಾಹಿತಿಗಳನ್ನು ಪಡೆದುಕೊಂಡು ರಾಜ್ಯ ಸರ್ಕಾರಕ್ಕೆ ಹೊಸ ಪ್ರಸ್ತಾವನೆ ಕಳುಹಿಸಿದ್ದರು. ಪರಿಣಾಮ, ಬೆಳಗಾವಿ ಪ್ರವಾಹ ಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಯಾಗಿದೆ. ರಾಜ್ಯ ಸರ್ಕಾರ ಬೆಳಗಾವಿ ಸೇರಿದಂತೆ 22 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶ ಎಂದು ಘೋಷಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.