ಬೆಳಗಾವಿ: ಸಂದೇಹಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಆರು ಮಂದಿಯನ್ನು ಮಾರ್ಕೆಟ್ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇಲ್ಲಿನ ವೀರಭದ್ರ ನಗರದಲ್ಲಿ ಈ ಆರು ಮಂದಿ ಪ್ರತಿ ಮನೆಗಳನ್ನು ನೋಡುತ್ತಾ ಶಂಕಾಸ್ಪದವಾಗಿ ಓಡಾಡುತ್ತಿದ್ದರು. ಪದೇ ಪದೆ ಒಂದೇ ಪ್ರದೇಶದಲ್ಲಿ ಓಡಾಡುವುದನ್ನು ಗಮನಿಸಿದ ಸಾರ್ವಜನಿಕರು ಅವರನ್ನು ಹಿಡಿದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ನಾವು ಆಂಧ್ರ ಮೂಲದವರು. ಹೊಟ್ಟೆಪಾಡಿಗಾಗಿ ವೇಷ ಧರಿಸಿ ಭಿಕ್ಷೆ ಬೇಡುತ್ತಾ ಜೀವನ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಮೈಸೂರು: ಪೊಲೀಸ್ ವ್ಯಾನ್ಗೆ ದ್ವಿಚಕ್ರ ವಾಹನ ಡಿಕ್ಕಿ, ಸವಾರ ಪಾರು
ಸ್ಥಳೀಯರು ಹಿಡಿದು ಥಳಿಸಿ ಮಾರ್ಕೆಟ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಕ್ಕಾಗಮಿಸಿದ ಪೊಲೀಸರು ಇವರ ಪ್ರಾಥಮಿಕ ವಿಚಾರಣೆ ನಡೆಸಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.