ಅಥಣಿ: ವಾಯವ್ಯ ಶಿಕ್ಷಕರ ಮತಕ್ಷೇತ್ರ ಚುನಾವಣೆ ಆರಂಭವಾಗಿದ್ದು, ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಸಂಕ ಅವರು ಅಥಣಿ ಪಟ್ಟಣದ 4 ಮತಗಟ್ಟೆಗಳಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ವಾಯವ್ಯ ಮತಕ್ಷೇತ್ರ ಚುನಾವಣೆಯಲ್ಲಿ ಪ್ರಜ್ಞಾವಂತ ಮತದಾರರು ಇರುವುದರಿಂದ ಕಾಂಗ್ರೆಸ್ ಅಭ್ಯರ್ಥಿಗಳಾದ ನಾನು ಹಾಗೂ ಪ್ರಕಾಶ್ ಹುಕ್ಕೇರಿ ಜಯಭೇರಿ ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಚುನಾವಣೆಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ. ಮತದಾರರನ್ನು ಸೆಳೆಯಲು ಹಲವಾರು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹಣದಿಂದ ಬಂದಿರುವುದು. ಈ ಚುನಾವಣೆಯಲ್ಲಿ ಅವರು ಹಣ ಹಂಚಿಕೆ ಮಾಡುವುದು ಹೊಸದಲ್ಲ ಎಂದು ಆರೋಪಿಸಿ ಅಸಮಾಧಾನ ವ್ಯಕ್ತಪಡಿಸಿದರು.
ಪ್ರಕಾಶ್ ಹುಕ್ಕೇರಿಯವರಾಗಲಿ ನಾವಾಗಲಿ ಮತದಾರರಿಗೆ ಯಾವುದೇ ಹಣ ಹಂಚಿಕೆ ಮಾಡಿಲ್ಲ. ನಮ್ಮ ಹತ್ತಿರ ಹಂಚಿಕೆ ಮಾಡಲು ಹಣವೂ ಇಲ್ಲ ಎಂದು ಹೇಳಿದರು.
ಇದನ್ನೂ ಓದಿ: ಶಿಕ್ಷಕರ ಕ್ಷೇತ್ರದಲ್ಲಿ ಮತದಾನ ಚುರುಕು: ಮಂದಗತಿಯಲ್ಲಿ ಸಾಗುತ್ತಿರುವ ಪದವೀಧರರ ಕ್ಷೇತ್ರದ ಮತದಾನ