ETV Bharat / city

ಸಂಪುಟ ವಿಸ್ತರಣೆ ‘ನಾಳೆ‌ ಬಾ’ ಎಂಬಂತಿದೆ: ಬಿಜೆಪಿ ಶಾಸಕ ಅಭಯ ಪಾಟೀಲ ವ್ಯಂಗ್ಯ - ಬಿಜೆಪಿ ಶಾಸಕ ಅಭಯ ಪಾಟೀಲ ಸುದ್ದಿ

ಎಲ್ಲ ಶಾಸಕರಿಗೆ ಊಟಕ್ಕೆ ಕರೆದಿದ್ದರು. ಅದರಂತೆ ಊಟ ಮಾಡಿ ಹೋಗುತ್ತಿದ್ದೇವೆ. ಸಂಪುಟ ವಿಸ್ತರಣೆ ‘ನಾಳೆ ಬಾ’ ಎಂಬಂತಿದೆ ಎಂದು ಶಾಸಕ ಅಭಯ ಪಾಟೀಲ ಹೇಳಿದ್ದಾರೆ.

BJP MLA Abhay Patil reaction to cabinet expansion, Abhay Patil reaction on cabinet expansion in Belagavi, BJP MLA Abhay Patil news, Belagavi news, ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಶಾಸಕ ಅಭಯ ಪಾಟೀಲ ವ್ಯಂಗ್ಯ, ಬೆಳಗಾವಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಭಯ ಪಾಟೀಲ ಪ್ರತಿಕ್ರಿಯೆ, ಬಿಜೆಪಿ ಶಾಸಕ ಅಭಯ ಪಾಟೀಲ ಸುದ್ದಿ, ಬೆಳಗಾವಿ ಸುದ್ದಿ,
ಬಿಜೆಪಿ ಶಾಸಕ ಅಭಯ ಪಾಟೀಲ
author img

By

Published : May 5, 2022, 9:58 AM IST

ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬೆಳಗಾವಿ ಬಿಜೆಪಿ ಶಾಸಕ ಅಭಯ್ ಪಾಟೀಲ್ ವ್ಯಂಗ್ಯವಾಡಿದ್ದು, 'ನಾಳೆ ಬಾ' ಎಂಬಂತಿದೆ ಎಂದರು. ಇದೇ ವೇಳೆ, ಅದು ಆಗೋದಲ್ಲ, ಹೋಗೋದಲ್ಲ. ನನಗೆ ಮಂತ್ರಿ ಸ್ಥಾನ ಕೊಡೋದು, ಬಿಡೋದು ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದು ತಿಳಿಸಿದರು.

ಶಾಸಕ ಅಭಯ್ ಪಾಟೀಲ್‌ಗೆ ಸಿಎಂ ಬುಲಾವ್ ಅನ್ನೋದು ತಪ್ಪು. ಎಲ್ಲ ಶಾಸಕರಿಗೂ ಊಟಕ್ಕೆ ಕರೆದಿದ್ದರು. ಹೀಗಾಗಿ ಊಟ ಮಾಡಿ ಬಂದಿದ್ದೇವೆ. ಮೂರು ಸ್ವೀಟ್, ರೊಟ್ಟಿ ಜೊತೆ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕದ ಊಟ ಇತ್ತು ಎಂದು ಸ್ಪಷ್ಟನೆ ಕೊಟ್ಟರು.

ಇದನ್ನೂ ಓದಿ: ಸಂಪುಟ ವಿಸ್ತರಣೆ ಆಗುವುದು ಅನುಮಾನ : ಶಾಸಕ ಅಭಯ ಪಾಟೀಲ್​

ನಮ್ಮ ಸರ್ಕಾರ ಬೆಳಗಾವಿ ಜಿಲ್ಲಾ ಕೇಂದ್ರಕ್ಕೆ ಅಭಿವೃದ್ಧಿ ವಿಷಯದಲ್ಲಿ ಪ್ರಾಮುಖ್ಯತೆ ನೀಡಿದೆ. ಇನ್ನು, ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಮ್ಮ ಗಮನಕ್ಕೆ ಬಂದಿಲ್ಲ. ಸಭೆಯಲ್ಲಿ ಆ ರೀತಿಯ ಯಾವುದೇ ಚರ್ಚೆ ನಡೆದಿಲ್ಲ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.