ETV Bharat / city

ಹೊಟ್ಟೆರೀ ಇಂಪಾರ್ಟೆಂಟು, ಮುಸ್ಲಿಂ ವ್ಯಾಪಾರಕ್ಕೆ ನಿರ್ಬಂಧವೂ ಅಸ್ಪೃಶ್ಯತೆ ಇದ್ದಂತೆ.. ಸರ್ಕಾರ ಬಾಯಿ ಮುಚ್ಕೊಂಡಿರೋದ್ಯಾಕೆ?.. ಹೆಚ್.ವಿಶ್ವನಾಥ್ - BJP MLC H Viswanath outraged against BJP leaders

ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಕೈತಪ್ಪುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಅವರು, ರಮೇಶ ಜಾರಕಿಹೊಳಿ ಸಚಿವ ಸ್ಥಾನ ತಪ್ಪಲು ಕಾಣುವ ಕೈಗಳೇ ಕಾರಣ. ರಮೇಶ್ ಜಾರಕಿಹೊಳಿ‌ಯನ್ನೂ ನಮ್ಮನ್ನೂ ಕಾಣುವ ಕೈಗಳೇ ಮುಗಿಸುತ್ತವೆ. ಸಿದ್ರಾಮಯ್ಯ, ನಾವು, ಜಾರಕಿಹೊಳಿ‌, ಹಿಂದುಳಿದ ವರ್ಗದವರು. ಹಿಂದುಳಿದ ವರ್ಗದವರು ಯಾರು ಬದಕಂಗಿಲ್ಲ ಇಲ್ಲಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ..

bjp-mlc-h-viswanath-outraged-against-bjp-leaders
2023ರ ನಂತರ ನಮಗೆ ಶಾಪ ವಿಮೋಚನೆ ಆಗುತ್ತೆ ಸದ್ಯ ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಹೆಚ್.ವಿಶ್ವನಾಥ್
author img

By

Published : Mar 27, 2022, 5:58 PM IST

ಬೆಳಗಾವಿ : ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಆಗುತ್ತೋ, ವಿಸ್ತರಣೆ ಆಗುತ್ತೋ ಗೊತ್ತಿಲ್ಲ. ಆದರೆ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕ್ಯಾಬಿನೆಟ್ ಸಚಿವರು ಆಗುವ ಸಂದರ್ಭದಲ್ಲಿ ಅದನ್ನು ಮಣ್ಣು ಮಾಡಿದವರು ಯಡಿಯೂರಪ್ಪನವರು ಮತ್ತು ಅವರ ಮಗ ವಿಜಯೇಂದ್ರ ಎಂದು ದೂರಿದ್ದಾರೆ.

ಸಮ್ಮಿಶ್ರ ಸರ್ಕಾರದ ಪತನವಾದ ಬಳಿಕ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂತು. ಇದಾದ ಬಳಿಕ ನಮ್ಮನ್ನು ಎಂಎಲ್‌ಸಿ ಮಾಡುವಾಗ ನಮಗೆ ಅನ್ಯಾಯವಾಗಿದೆ. ಅಸೆಂಬ್ಲಿಯಿಂದ ಆಯ್ಕೆಯಾಗಿ ನಾನು ಕೌನ್ಸಿಲ್‌ಗೆ ಬರಬೇಕಾಗಿತ್ತು. ಅದನ್ನು ತಪ್ಪಿಸಿ ನಮ್ಮನ್ನು ನಾಮ ನಿರ್ದೇಶನ ಮಾಡಿದರು. ನಾಮಿನೆಟ್ ಸದಸ್ಯರಿಗೆ ಮಂತ್ರಿಯಾಗುವ ಯೋಗವಿಲ್ಲ. ಸುಪ್ರೀಂಕೋರ್ಟ್ ತೂಗುಗತ್ತಿ ಇದೆ. ಅದು ಗೊತ್ತಿದ್ದು, ನಮಗೆ ಈ ಅನ್ಯಾಯ ಮಾಡಲಾಗಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಗೋಕಾಕ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಂಎಲ್‌ಸಿ ಹೆಚ್.ವಿಶ್ವನಾಥ್..

2023ರ ನಂತರ ನಮಗೆ ಶಾಪ ವಿಮೋಚನೆ ಆಗುತ್ತೆ. ಈ ಕಾರಣಕ್ಕೆ ಸದ್ಯ ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಸರ್ಕಾರದ ಜತೆಗೆ ಕೆಲಸ ಮಾಡುತ್ತೇನೆ. ನಾನು ಸಚಿವ ಸ್ಥಾನ ನೀಡುವಂತೆ ಯಾರಿಗೂ ಸಪೋರ್ಟ್ ಮಾಡಲ್ಲ. ರಮೇಶ್ ಜಾರಕಿಹೊಳಿ ನಮ್ಮ ಸ್ನೇಹಿತರು. ಬಿಜೆಪಿ ಸರ್ಕಾರ ಸ್ಥಾಪನೆಗೆ ಅವರು ಕೂಡ ಪ್ರಮುಖ ಕಾರಣರಾದವರು.

ಹೈಕಮಾಂಡ್ ಯಾವ ರೀತಿ ತೀರ್ಮಾನ ತೆಗೆದುಕೊಳ್ಳುತ್ತೆ ನೋಡೋಣ. ಇಂದಿನ ರಾಜಕಾರಣದಲ್ಲಿ ಕೃತಜ್ಞತೆ ಪದಕ್ಕೆ ಅರ್ಥ ಇಲ್ಲದಂತಾಗಿದೆ. ಕೃತಜ್ಞತೆ ಇಲ್ಲದ ಜನನಾಯಕರಾಗುತ್ತಿದ್ದೇವೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ತರಲು ಎಲ್ಲರೂ ಸೇರಿ ದುಡಿಯುವುದಾಗಿ ಹೇಳಿದ್ದಾರೆ.

ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಕೈತಪ್ಪುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಅವರು, ರಮೇಶ ಜಾರಕಿಹೊಳಿ ಸಚಿವ ಸ್ಥಾನ ತಪ್ಪಲು ಕಾಣುವ ಕೈಗಳೇ ಕಾರಣ. ರಮೇಶ್ ಜಾರಕಿಹೊಳಿ‌ಯನ್ನೂ ನಮ್ಮನ್ನೂ ಕಾಣುವ ಕೈಗಳೇ ಮುಗಿಸುತ್ತವೆ. ಸಿದ್ರಾಮಯ್ಯ, ನಾವು, ಜಾರಕಿಹೊಳಿ‌, ಹಿಂದುಳಿದ ವರ್ಗದವರು. ಹಿಂದುಳಿದ ವರ್ಗದವರು ಯಾರು ಬದಕಂಗಿಲ್ಲ ಇಲ್ಲಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧ ಹೇರಿಕೆ ಸರಿಯಲ್ಲ : ನಾವು ರಾಜ್ಯವನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಮುಸ್ಲಿಂರಿಗೆ ದೇವಸ್ಥಾನ ಆವರಣದಲ್ಲಿ ವ್ಯಾಪಾರ ನಿರ್ಬಂಧ ಹೇರಿಕೆ ಸರಿಯಲ್ಲ. ಇದನ್ನು ಯಾರೂ ಒಪ್ಪುವುದಿಲ್ಲ ಎಂದು ಎಂಎಲ್ಸಿ ಹೆಚ್.ವಿಶ್ವನಾಥ್ ಹೇಳಿದರು.

ಗೋಕಾಕ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇರೆ ಬೇರೆ ರಾಷ್ಟ್ರಗಳಲ್ಲಿ ಭಾರತೀಯರು ಎಷ್ಟು ಜನರಿದ್ದೇವೆ ನಾವು. ಭಾರತೀಯರಿಗೂ ಇದೇ ರೀತಿಯ ನಿಬಂಧನೆಗಳನ್ನು ಹಾಕಿದರೆ ಏನು ಮಾಡುವುದು?. ಇದೆಲ್ಲ ಸರಿಯಿಲ್ಲ, ಯಾವ ದೇವರೂ ಧರ್ಮನೂ ಈ ಬಗ್ಗೆ ಹೇಳಿಲ್ಲ ಎಂದು ಹೇಳಿದ್ದಾರೆ.

ಸುಮ್ಮ ಸುಮ್ಮನೇ ಮುಸ್ಲಿಮರು ಅಲ್ಲಿ ವ್ಯಾಪಾರ ಮಾಡಬಾರದು ಎಂದು ಮಾಡಿದವರು ಯಾರು. ಸರ್ಕಾರ ಈ ಬಗ್ಗೆ ಕ್ರಮಕೈಗೊಳ್ಳಬೇಕು. ಇಲ್ಲವಾದರೆ ಜನರು ಕ್ರಮಕೈಕೊಳ್ಳುತ್ತಾರೆ ಎಂದಿದ್ದಾರೆ. ಮೋದಿ ಕೂಡ ಈವರೆಗೂ ಹಿಂದುತ್ವದ ಬಗ್ಗೆ ಮಾತಾಡಿಲ್ಲ. ನಾವು ರಾಜ್ಯವನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಮುಸ್ಲಿಮರಿಗೆ ದೇವಸ್ಥಾನ ಆವರಣದಲ್ಲಿ ವ್ಯಾಪಾರ ನಿರ್ಬಂಧ ಹೇರುವುದು ಸರಿಯಲ್ಲ. ಇದನ್ನು ಯಾರೂ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ಜಾತಿ ಮತ್ತು ಧರ್ಮದ ಆಧಾರದ ಮೇಲೆ ರಾಜಕಾರಣ ಸಲ್ಲ : ಜಾತಿ ಮತ್ತು ಧರ್ಮದ ಆಧಾರದ ಮೇಲೆ ರಾಜಕಾರಣ ಮಾಡಬಾರದು. ಈ ರೀತಿ ಮಾಡುವುದು ಬಹಳ ಅಪಾಯ. ಬಿಜೆಪಿಯವರು ಹಿಂದೂ ಓಲೈಕೆ ಮಾಡುವುದು, ಕಾಂಗ್ರೆಸ್ ಮುಸ್ಲಿಮರ ಓಲೈಕೆ ಮಾಡುವುದು ಬೇರೆ. ಬಿಜೆಪಿಯವರು ಮುಸ್ಲಿಮರನ್ನು ಹೊರ ಹಾಕುವುದಾಗಿ ಎಲ್ಲಿಯಾದ್ರೂ ಬರೆದುಕೊಂಡಿದೇವಾ?..ಬಿಜೆಪಿಯ ಸಂವಿಧಾನದಲ್ಲಿ ಮುಸ್ಲಿಂಮರು ಈ ದೇಶದಲ್ಲಿ ಇರಬಾರದು ಅಂತಾ ಬರೆದುಕೊಂಡಿದೇವಾ.. ಅಂಬೇಡ್ಕರ್ ಕೊಟ್ಟ ಕಾನೂನಿನ ಮೇಲೆ ದೇಶ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಓದಿ :IPL 2022: ಮುಂಬೈ ವಿರುದ್ಧ ಟಾಸ್​​ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್​​ ಆಯ್ಕೆ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.