ಚಿಕ್ಕೋಡಿ : ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣವಾಗಲು ಮಾಜಿ ಪ್ರಧಾನಿ ದೇವೆಗೌಡರೇ ಬುನಾದಿ ಹಾಕಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಕುಟುಕಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣವಾಗಲು ಕರ್ನಾಟಕದಿಂದಲೇ ಚಾಲನೆ ಸಿಕ್ಕಿದೆ. ಕಾಂಗ್ರೆಸ್ ದೋಸ್ತಿಗಳಾಗಿರುವ ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ಅವರೇ ಚಾಲನೆ ನೀಡಿದ್ದಾರೆ ಎಂದು ಗೇಲಿ ಮಾಡಿದರು.
ಮೈತ್ರಿ ಒಪ್ಪಂದದಂತೆ 7 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ. ಇದರಿಂದ ಈ ಕ್ಷೇತ್ರಗಳಲ್ಲಿ ಬರುವ 56 ವಿಧಾನಸಭಾ ಮತಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುಕ್ತ ಮಾಡಲಾಗಿದೆ. ಅಷ್ಟು ಕ್ಷೇತ್ರಗಳಲ್ಲಿ ಮತಯಂತ್ರಗಳಲ್ಲಿ ಕಾಂಗ್ರೆಸ್ ಚಿಹ್ನೆ ಇರುವುದಿಲ್ಲ. ಇದಕ್ಕೆ ಸ್ವತಃ ದೇವೇಗೌಡರೇ ನಾಂದಿ ಹಾಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಬಿಜೆಪಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ಅವರನ್ನು ಮಾರಿಕೊಳ್ಳುವ ಸಂಸ್ಕೃತಿ ನಮ್ಮದಲ್ಲ ಎಂದು ಕವಟಗಿಮಠ ಹೇಳಿದರು.