ಬೆಳಗಾವಿ : ಕುಂದಾನಗರಿ ಬೆಳಗಾವಿಯಲ್ಲಿ ಇಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆ ಸಿಎಂ ಸಂಚರಿಸುವ ಮಾರ್ಗದಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಸ್ಯಾನಿಟೈಸರ್ ಸಿಂಪಡಿಸಿದ್ದಾರೆ.
ನಿನ್ನೆ ಬೆಳಗಾವಿಗೆ ಆಗಮಿಸಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಬೆಳಗಾವಿಯ ಯುಕೆ-27 ಹೋಟೆಲ್ನಲ್ಲಿ ತಂಗಿದ್ದಾರೆ. ಸಿಎಂ ಜತೆಗೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹ ಅದೇ ಹೋಟೆಲ್ನಲ್ಲಿ ತಂಗಿದ್ದಾರೆ.
ಎಲ್ಲರೂ ಒಟ್ಟಾಗಿ ಕಾರ್ಯಕ್ರಮಕ್ಕೆ ತೆರಳಲಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಜೊತೆಗೆ ಸಿಎಂ ತೆರಳುವ ರಸ್ತೆಗೆ ಮಹಾನಗರ ಪಾಲಿಕೆಯಿಂದ ಸ್ಯಾನಿಟೈಸೇಷನ್ ಮಾಡಲಾಗಿದೆ.
ಚೆನ್ನಮ್ಮ ವೃತ್ತ ಸೇರಿದಂತೆ ಕಾಲೇಜು ರೋಡ್ನಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದ್ದು, ಎಸಿಪಿ ನೇತೃತ್ವದಲ್ಲಿ ಮೂರು ಡಿಎಆರ್ ತುಕಡಿ ನೇಮಕ ಮಾಡಲಾಗಿದೆ. ಅಲ್ಲದೇ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸದಂತೆ ಕನ್ನಡಪರ ಕಾರ್ಯಕರ್ತರಿಗೆ ಪೊಲೀಸರು ಎಚ್ಚರಿಕೆ ಕೊಟ್ಟಿದ್ದಾರೆ.
ಇದನ್ನೂ ಓದಿ: ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆ; ಕೇಸರಿಮಯವಾದ ಕುಂದಾನಗರಿ