ETV Bharat / city

ಕಬ್ಬು ಕಿತ್ತುಕೊಳ್ಳಲು ಹೋಗಿ ಟ್ರ್ಯಾಕ್ಟರ್ ಅಡಿ ಸಿಲುಕಿದ ಬಾಲಕ.. ರಕ್ಷಣೆಗೆ ಬರದೇ ಕೈಗೆ ಮೊಬೈಲ್​ ಹಿಡಿದರಲ್ಲ ಜನ!

ಕಬ್ಬು ಹೇರಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್​​ನಲ್ಲಿನ ಕಬ್ಬು ಕಿತ್ತುಕೊಳ್ಳಲು ಹೋಗಿದ್ದ ಬಾಲಕನೋರ್ವ ಆಯತಪ್ಪಿ ಟ್ರ್ಯಾಕ್ಟರ್​​ನ ಚಕ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಈತ ರಕ್ತದ ಮಡುವಿನಲ್ಲಿ ನಡು ರಸ್ತೆಯಲ್ಲಿಯೇ ಬಿದ್ದು ಒದ್ದಾಡುತ್ತಿದ್ದರೂ ಅವನ ರಕ್ಷಣೆಗೆ ಬಾರದ ಜನ ಕೈಗೆ ಮೊಬೈಲ್​ ಹಿಡಿದು ವಿಡಿಯೋ ಮಾಡುವ ಮೂಲಕ ಮಾನವೀಯತೆ ಮರೆತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

inhuman incident in Belgaum
inhuman incident in Belgaum
author img

By

Published : Feb 19, 2022, 7:24 PM IST

ಬೆಳಗಾವಿ: ಕಬ್ಬು ಕಿತ್ತುಕೊಳ್ಳಲು ಹೋಗಿದ್ದ ಬಾಲಕನ ಮೇಲೆ ಟ್ರ್ಯಾಕ್ಟರ್ ಹರಿದ ಪರಿಣಾಮ ಬಾಲಕ ರಸ್ತೆಯಲ್ಲಿಯೇ ಬಿದ್ದು ನರಳಾಡುತ್ತಿದ್ದರೂ ಆತನ ರಕ್ಷಣೆಗೆ ಬಾರದ ಜನ ಮೊಬೈಲ್​ನಲ್ಲಿ ವಿಡಿಯೋ ಮಾಡುತ್ತಾ ನಿಂತ ಅಮಾನವೀಯ ಘಟನೆ ಜಿಲ್ಲೆಯ ಬೈಲಹೊಂಗಲದಲ್ಲಿ ನಡೆದಿದೆ. ‌

ಕಬ್ಬು ಕಿತ್ತುಕೊಳ್ಳಲು ಹೋಗಿ ಟ್ರ್ಯಾಕ್ಟರ್ ಅಡಿ ಸಿಲುಕಿದ ಬಾಲಕನ ನರಳಾಟ

ಬೈಲಹೊಂಗಲ ತಾಲೂಕಿನ ಅಮಟೂರ ಗ್ರಾಮದಲ್ಲಿ ಕಬ್ಬು ಹೇರಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್​​ನಲ್ಲಿನ ಕಬ್ಬು ಕಿತ್ತುಕೊಳ್ಳಲು ಹೋಗಿದ್ದ ಬಾಲಕ ಆಯತಪ್ಪಿ ಟ್ರ್ಯಾಕ್ಟರ್​​ನ ಚಕ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಆತ ರಕ್ತದ ಮಡುವಿನಲ್ಲಿ ನಡು ರಸ್ತೆಯಲ್ಲೇ ಒದ್ದಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇತ್ತ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಬಾಲಕನ ರಕ್ಷಣೆಗೆ ಸ್ಥಳೀಯರು ಮುಂದಾಗದೆ ಮೊಬೈಲ್​ನಲ್ಲಿ ವಿಡಿಯೋ ಮಾಡುವ ಮೂಲಕ ಮಾನವೀಯತೆಯನ್ನೇ ಮರೆತಿದ್ದಾರೆ.

ಇದನ್ನೂ ಓದಿ: ಛತ್ತೀಸ್​ಗಢದಲ್ಲಿ ಖಾಸಗಿ ಆಸ್ಪತ್ರೆಗಳಿಂದ ನರಮೇಧ ಆರೋಪ.. 3 ವರ್ಷದಲ್ಲಿ 3 ಸಾವಿರ ಮಹಿಳೆಯರು ಸಾವು!

ಘಟನೆ ಸಂಬಂಧ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಚಲಿಸುತ್ತಿರುವ ಕಬ್ಬಿನ ಟ್ರ್ಯಾಕ್ಟರ್​ಗಳ ಬೆನ್ನುಹತ್ತಿ ಕಬ್ಬು ಮುರಿಯಲು ಹಿಂದೆ ಹಿಂದೆ ಓಡುವ ಮಕ್ಕಳ ಬಗ್ಗೆ ಇನ್ನಾದರೂ ಜನರು ಎಚ್ಚರಿಕೆ ವಹಿಸಬೇಕು ಎಂದು ಬೈಲಹೊಂಗಲ ಸಿಪಿಐ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.