ETV Bharat / city

ಬೆಳಗಾವಿಯಲ್ಲಿ ಕೊನೆಗೂ ನೆರವೇರಿತು ಕೊರೊನಾ ಸೋಂಕಿತರ ಮೃತದೇಹಗಳ ಅಂತ್ಯಕ್ರಿಯೆ

ಆರೋಗ್ಯ ಇಲಾಖೆ ಹಾಗೂ ಮಹಾನಗರ ಪಾಲಿಕೆ ನಡುವೆ ಹೊಂದಾಣಿಕೆ ಇಲ್ಲದೆ ಅಂತ್ಯಕ್ರಿಯೆ ಮಾಡದೇ ಇಡಲಾಗಿದ್ದ ಕೊರೊನಾ ಸೋಂಕಿತ ಮೃತದೇಹಗಳ ಅಂತ್ಯಕ್ರಿಯೆ ಇಂದು ನೆರವೇರಿದೆ.

Buriel of covid patients deadbody in Belguam
ಕೊರೊನಾ ಸೋಂಕಿತ ಮೃತದೇಹಗಳ ಅಂತ್ಯಕ್ರಿಯೆ
author img

By

Published : Jul 5, 2020, 1:46 PM IST

ಬೆಳಗಾವಿ: ನಿನ್ನೆ ಜಿಲ್ಲೆಯ ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಇಬ್ಬರು ಕೊರೊನಾ ಸೋಂಕಿತರ ಅಂತ್ಯಕ್ರಿಯೆ ಕೊನೆಗೂ ನೆರವೇರಿದೆ.

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ 70 ವರ್ಷದ ವೃದ್ಧ ಹಾಗೂ ಬೆಳಗಾವಿಯ ವೀರಭದ್ರ ನಗರದ 48 ವರ್ಷದ ವ್ಯಕ್ತಿ ಶನಿವಾರ ಮೃತಪಟ್ಟಿದ್ದರು. ಮೃತದೇಹಗಳನ್ನು ಕೋವಿಡ್ ಮಾರ್ಗಸೂಚಿಯ ಪ್ರಕಾರ ಪ್ಯಾಕ್ ಮಾಡಿ ಇಡಲಾಗಿತ್ತು. ಆದ್ರೆ, ಆರೋಗ್ಯ ಇಲಾಖೆ ಹಾಗೂ ಮಹಾನಗರ ಪಾಲಿಕೆ ನಡುವೆ ಹೊಂದಾಣಿಕೆ ಇಲ್ಲದ ಪರಿಣಾಮ ಕೋವಿಡ್ ಶವಗಳ‌ ಅಂತ್ಯಕ್ರಿಯೆ ಮಾಡದೇ ಬಿಮ್ಸ್ ಶವಾಗಾರದಲ್ಲಿ ಇಡಲಾಗಿತ್ತು. ಇದರಿಂದಾಗಿ ಮೃತರ ಕುಟುಂಬಸ್ಥರು‌ ಕೂಡ ನಿನ್ನೆಯಿಂದ ಜಿಲ್ಲಾಸ್ಪತ್ರೆಯ ಆವರಣದಲ್ಲೇ ಕಾದು ಕುಳಿತಿದ್ದರು.

ಕೊನೆಗೂ ನೆರವೇರಿತು ಕೊರೊನಾ ಸೋಂಕಿತರ ಮೃತದೇಹಗಳ ಅಂತ್ಯಕ್ರಿಯೆ

ಇಂದು ಅಂಜುಮನ್ ಇಸ್ಲಾಂ ಎನ್​ಜಿಓ ತಂಡ ಹಾಗೂ ಮಹಾನಗರ ಪಾಲಿಕೆ ಸಹಕಾರದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ. ಅಂತ್ಯಕ್ರಿಯೆಯಲ್ಲಿ ಬೆಳಗಾವಿ ತಹಶೀಲ್ದಾರ್​ ಸೇರಿದಂತೆ ಪಾಲಿಕೆ ಅಧಿಕಾರಿಗಳು ಹಾಗೂ ಕುಟುಂಬಸ್ಥರು ಭಾಗಿಯಾಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.