ಬೆಳಗಾವಿ: ರಾಜ್ಯದ 15 ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣೆ ಘೋಷಣೆ ಆಗುತ್ತಿದ್ದಂತೆ ಅನರ್ಹ ಶಾಸಕ ಶ್ರೀಮಂತ್ ಪಾಟೀಲ್ ಬೆಂಗಳೂರಿಗೆ ದೌಡಾಯಿಸಿದ್ದಾರೆ.
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಂತರ ಇಂಡಿಗೋ ಏರ್ಲೈನ್ಸ್ ವಿಮಾನದ ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು. ಪಾಟೀಲ್ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಕಾಗವಾಡ ಕ್ಷೇತ್ರದಲ್ಲಿಯೇ ಇದ್ದರು. ಉಪಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ಶ್ರೀಮಂತ್ ಪಾಟೀಲ್ ದಿಢೀರ್ ಬೆಂಗಳೂರಿಗೆ ಪ್ರಯಾಣ ಬೆಳಸಿರುವುದುನ್ನು ಗಮನಿಸಿದರೆ ಅನರ್ಹ ಶಾಸಕರೆಲ್ಲರೂ ಬೆಂಗಳೂರಿನಲ್ಲಿ ಸಭೆ ಸೇರುವ ನಿರೀಕ್ಷೆ ಇದೆ ಎನ್ನಲಾಗಿದೆ.