ಚಿಕ್ಕೋಡಿ: ಲಾಕ್‌ಡೌನ್ ಜಾರಿ ಆದಾಗಿನಿಂದ ಜನರ ಸ್ಥಿತಿಗತಿ ಸುಧಾರಿಸಲು ಯಾವ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ.
ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಹುಕ್ಕೇರಿ ಮತಕ್ಷೇತ್ರದ ಬೆಣಿವಾಡ ಗ್ರಾಮಕ್ಕೆ ಭೇಟಿ ನೀಡಿದ ಅವರು, ಕೊರೊನಾ ಸೋಂಕು ತಡೆಗೆ ಮುಂಜಾಗೃತಾ ಕ್ರಮವಾಗಿ ಗ್ರಾಮ ಪಂಚಾಯಿತಿಗಳಲ್ಲಿ ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು.
ಕೆಲ ಅಗತ್ಯ ಸಲಹೆಗಳನ್ನು ಕೂಡ ನೀಡಿದರು. ಗ್ರಾಮದಲ್ಲಿ ಎಲ್ಲರೂ ಮಾಸ್ಕ್ ಧರಿಸುವಂತೆ ಹಾಗೂ ಸ್ಯಾನಿಟೈಸರ್ ಬಳಸಲು ಜಾಗೃತಿ ಮೂಡಿವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಓಡಾಡದಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿದರು.