ಚಿಕ್ಕೋಡಿ/ಬೆಳಗಾವಿ: ಚಿಕ್ಕೋಡಿ ಉಪವಿಭಾಗದ ನಿಪ್ಪಾಣಿ ಹಾಗೂ ಹುಕ್ಕೇರಿ ತಾಲೂಕಿನ ಐವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
![chikodi five sslc students become topper](https://etvbharatimages.akamaized.net/etvbharat/prod-images/12723305_one.jpg)
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಭರತೇಶ ಪ್ರೌಢ ಶಾಲೆ ವಿದ್ಯಾರ್ಥಿನಿ ಗಾಯತ್ರಿ ತುಕಾರಾಮ ಮರಾಠೆ, ವಿ ಎಂ ಕತ್ತಿ ಪ್ರೌಢ ಶಾಲೆ ವಿದ್ಯಾರ್ಥಿನಿ ಶಿಲ್ಪಾ ಭಸ್ತವಾಡೆ ಹಾಗೂ ಶಿರಗೊನ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿ ವಿನಯ ಮಹೇಶ ಹಿರೇಮಠ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ ಎಂದು ಹುಕ್ಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ ಈಟಿವಿ ಭಾರತಕ್ಕೆ ಮಾಹಿತಿ ನೀಡಿದರು.
![chikodi five sslc students become topper](https://etvbharatimages.akamaized.net/etvbharat/prod-images/12723305_two.jpg)
ನಿಪ್ಪಾಣಿ ತಾಲೂಕಿನ ಶಿರಗಾಂವಿ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿನಿ ಕೀರ್ತಿ ಕರೆಪ್ಪಗೊಳ ಹಾಗೂ ನಿಪ್ಪಾಣಿ ಪಬ್ಲಿಕ್ ಪ್ರೌಢ ಶಾಲೆ ವಿದ್ಯಾರ್ಥಿ ಶ್ರೀಶೈಲ ಕೊನೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ ಎಂದು ನಿಪ್ಪಾಣಿ ಬಿಇಒ ರೇವತಿ ಮಠದ ತಿಳಿಸಿದ್ದಾರೆ.
ಇದನ್ನೂ ಓದಿ:SSLC ಫಲಿತಾಂಶ ಪ್ರಕಟ: ಬೇರೆಯವರಿಂದ ಪರೀಕ್ಷೆ ಬರೆಸಿದ್ದ ವಿದ್ಯಾರ್ಥಿನಿ ಡಿಬಾರ್, ಉಳಿದವರೆಲ್ಲರೂ ಪಾಸ್