ಚಿಕ್ಕೋಡಿ: ಸಮಾಜದ ಜನರಿಗೆ ತಿಳುವಳಿಕೆ, ಜಾಗೃತಿ ಮೂಡಿಸಬೇಕಿದ್ದ ಅಧಿಕಾರಿಗಳೇ ಸಣ್ಣ ಸಣ್ಣ ಮಕ್ಕಳನ್ನು ದುಡಿಸಿಕೊಳ್ಳುತ್ತಿರುವ ಆರೋಪ ಕೇಳಿಬಂದಿದೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಪುರಸಭೆಯ (Mugalkhod Municipality) ಅಧಿಕಾರಿಗಳು ಬಾಲಕಾರ್ಮಿಕರನ್ನು (Child labour) ಬಳಸಿಕೊಳ್ಳುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಬಡಮಕ್ಕಳ ವಿದ್ಯಾಭ್ಯಾಸಕ್ಕೆ (Education of the poor) ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಜನರಿಗೆ ತಲುಪಿಸಬೇಕಿದ್ದ ಪುರಸಭೆ ಅಧಿಕಾರಿಗಳ ಬೇಜವಾಬ್ದಾರಿತನ ತೋರಿದ್ದಾರೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಾಲಕಾರ್ಮಿಕರನ್ನು ಬಳಸಿಕೊಂಡು ತಮ್ಮ ಅಧಿಕಾರ ಚಲಾವಣೆ ಮಾಡುತ್ತಿರುವ ಪುರಸಭೆ (Mugalkhod Municipality) ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ (Department of Women and Child Welfare) ವಿಫಲವಾಗಿದೆ ಎಂದು ಆರೋಪಿಸಲಾಗಿದೆ.
ಬಾಲಕಾರ್ಮಿಕರನ್ನು (Child labour) ದುರ್ಬಳಕೆ ಮಾಡಿಕೊಳ್ಳುತ್ತಿದ್ದರೂ ಅವರನ್ನು ರಕ್ಷಣೆ ಮಾಡುವಲ್ಲಿ ವಿಫಲರಾದ ರಾಯಬಾಗ ಶಿಶುಅಭಿವೃದ್ಧಿ ಇಲಾಖೆ ಅಧಿಕಾರಿಗಳು ಹಾಗೂ ಪುರಸಭೆ ಮುಖ್ಯಾಧಿಕಾರಿಯನ್ನು ತಕ್ಷಣವೇ ವಜಾ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: Karnataka Bitcoin case: ನನ್ನ ಬ್ಯಾಂಕ್ ಖಾತೆಯಿಂದ ಹಣ ವಶ ಎಂಬುದೆಲ್ಲಾ ಬೋಗಸ್: ಶ್ರೀಕಿ